ಮೋದಿಗೆ ಪ್ರಧಾನಿ ಪಟ್ಟ ಖಚಿತ
ಕ.ಪ್ರ.ವಾರ್ತೆ ಟಿ ಮೂಡಿಗೆರೆ ಟಿ ಏ.10
ದೇಶಾದ್ಯಂತ ಮೋದಿ ಅಲೆ ಹೆಚ್ಚಾಗಿದ್ದು, ಈ ಬಾರಿ ಭಾರತ ದೇಶದ ಪ್ರಧಾನಮಂತ್ರಿ ಮೋದಿ ಆಗುವುದರಲ್ಲಿ ಸಂಶಯವೇ ಇಲ್ಲ ಎಂದು ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಭವಿಷ್ಯ ನುಡಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವೈಪಲ್ಯ, ರಾಜ್ಯ ಸರ್ಕಾರದ ನಾಯಕತ್ವ ಕೊರತೆಯಿಂದ ಬೇಸತ್ತಿದ್ದಾರೆ. ಮೋದಿ ಅವರನ್ನು ಬಲಪಡಿಸುವ ಉದ್ದೇಶದಿಂದ ಉಡುಪಿ- ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರನ್ನು ಬೆಂಬಲಿಸುವಂತೆ ಮತದಾರರ ಮನವೊಲಿಸಲಾಗಿದೆ ಎಂದರು.
ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಎಂ.ಕೆ. ಪ್ರಾಣೇಶ್ ಮಾತನಾಡಿ, ಬಿಜೆಪಿ ಕೋಮುವಾದಿ ಪಕ್ಷ ಎಂದು ಹೇಳುತ್ತಿದ್ದ ಕಾಂಗ್ರೆಸ್ ಸರ್ಕಾರ, ಶಾದಿಭಾಗ್ಯ ಯೋಜನೆ ಕೇವಲ 1 ವರ್ಗಕ್ಕೆ ಸೀಮಿತಗೊಳಿಸಿದ್ದಲ್ಲದೆ ಪ್ರವಾಸದ ಯೋಜನೆ ಜಾರಿಗೊಳಿಸಿ ಮುಗ್ದ ಮಕ್ಕಳಲ್ಲಿ ಜಾತಿ ಎಂಬ ವಿಷಬೀಜ ಬಿತ್ತುವಂಂತಹ ಮಹಾನ್ ಕಾರ್ಯ ಮಾಡಿದೆ ಎಂದರು.
ತಾಲೂಕು ಅಧ್ಯಕ್ಷ ಸುದರ್ಶನ್, ಬೋಜೇಗೌಡ, ಜಯಂತ್, ಮನೋಜ್, ಪ್ರಮೋದ್, ವಿನೋದ್ ಕಣಚೂರು, ಪರೀಕ್ಷಿತ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

