ಮತದಾನಕ್ಕೆ ಮುಳುವಾದ ಅಂತರ್ಜಾತಿ ವಿವಾಹ
ಕ.ಪ್ರ.ವಾರ್ತೆ ್ಣ ಮೂಡಿಗೆರೆ ್ಣ ಏ. 11
ರಾಜ್ಯದಲ್ಲಿ ಅಂತರ್ಜಾತಿ ವಿವಾಹವಾದರೇ ಸರ್ಕಾರ ಅವರಿಗೆ ಇಲಾಖೆಯ ಮೂಲಕ ಆರ್ಥಿಕ ನೆರವು ನೀಡಿ ಕಲ್ಪಿಸಲಾಗುತ್ತದೆ.
ಆದರೆ, ಇದಕ್ಕೆ ತದ್ವಿರುದ್ಧವೆಂಬಂತೆ ತಾಲೂಕಿನ ಅಡ್ಡಗುಡ್ಡೆ ಗಿರಿಜನ ಕಾಲೋನಿಯಲ್ಲಿ ಅಂತರ್ಜಾತಿ ವಿವಾಹವಾದವರ ಮತದಾನದ ಹಕ್ಕನ್ನೇ ಕಿತ್ತುಕೊಳ್ಳಲಾಗಿದೆ.
ಹೌದು. ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡ್ಡಗುಡ್ಡೆ ಗಿರಿಜನ ಹಾಡ್ಯದಲ್ಲಿ ಅಂತರ್ಜಾತಿ ವಿವಾಹವಾದ ದಂಪತಿ ಮತದಾನ ಹಕ್ಕಿನಿಂದ ವಂಚಿತರಾಗಿದ್ದಾರೆ. ಅಷ್ಟೇ ಅಲ್ಲ, ಅವರಿಗೆ ಯಾವುದೇ ಮೂಲಭೂತ ಸೌಕರ್ಯ ನೀಡದಂತೆ ತಡೆಯಲಾಗಿದೆ.
ಕಾಲೋನಿಯ ರಾಜೇಶ ಮತ್ತು ರೇಷ್ಮಾ ಕಳೆದ 4 ವರ್ಷಗಳ ಹಿಂದೆ ಅಂತರ್ಜಾತೀಯ ವಿವಾಹವಾಗಿದ್ದರು. ಸರ್ಕಾರದ ಸವಲತ್ತಿಗೆ ಮನವಿಯನ್ನೂ ಸಲ್ಲಿಸಿದ್ದರು. ಆದರೆ ಸಂಬಂಧಪಟ್ಟ ಇಲಾಖೆ ಇವರ ಮನವಿ ಕಸದ ಬುಟ್ಟಿಗೆ ಹಾಕಿ ಸರ್ಕಾರದಿಂದ ಹಣ ಬಿಡುಗಡೆಯಾಗದಂತೆ ಮಾಡಿದೆ.
ಅಂತರ್ಜಾತಿ ವಿವಾಹವಾದ ಕಾರಣ ಊರುಬಗೆ ಗ್ರಾಮ ಪಂಚಾಯಿತಿ ಇವರಿಗೆ ಮನೆ ಕಟ್ಟಿಕೊಳ್ಳಲು ಹಕ್ಕು ಪತ್ರವನ್ನು ನೀಡಿಲ್ಲ. ಮತದಾರರ ಪಟ್ಟಿಯಲ್ಲಿ ಸೇರಿಸಿದ್ದ ಇವರ ಹೆಸರನ್ನೂ ತೆಗೆದುಹಾಕಿ ಮತದಾನದ ಹಕ್ಕು ಇಲ್ಲದಂತೆ ಮಾಡಲಾಗಿದೆ.
ಅಂತರ್ಜಾತಿ ವಿವಾಹವಾಗಿದ್ದೇ ನಮ್ಮ ತಪ್ಪೇ ಎಂದು ರಾಜೇಶ ಪತ್ರಕರ್ತರ ಎದುರು ತನಗಾದ ಅನ್ಯಾಯದ ಬಗ್ಗೆ ಅಳಲು ತೋಡಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

