ಮತದಾನ ಅರಿವು ಮೂಡಿಸಲು ಮನವಿ
ಚಿಕ್ಕಮಗಳೂರು: ಪ್ರತಿಯೊಬ್ಬ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮತದಾನ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಕರೆ ನೀಡಿದ್ದಾರೆ.
ನಗರದ ಬಾಲ ಭವನದಲ್ಲಿ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಿಕೆ ಯೋಜನೆ ವತಿಯಿಂದ ಅಂಗನವಾಡಿ ಕಾರ್ಯಕರ್ತರಿಗೆ ಆಯೋಜಿಸಿದ್ದ ಮತದಾನ ಜಾಗೃತಿ ಶಿಬಿರದಲ್ಲಿ ಅವರು ಮಾತನಾಡಿದರು.
ಮತದಾನಕ್ಕೆ ಪ್ರೋತ್ಸಾಹಿಸಿ: ಏ. 17 ರಂದು ನಡೆಯಲಿರುವ ಮತದಾನದಲ್ಲಿ ಜಿಲ್ಲೆಯಲ್ಲಿ ಶೇ. 85 ರಷ್ಟು ಮತದಾನವಾಗಬೇಕು, ಈ ಹಿನ್ನೆಲೆಯಲ್ಲಿ ತಾವೆಲ್ಲರೂ ಮತದಾನದಲ್ಲಿ ಭಾಗವಹಿಸುವುದರ ಜೊತೆಗೆ ತಮ್ಮ ನೆರೆ ಹೊರೆಯವರನ್ನು ಹಾಗೂ ತಮ್ಮ ಗ್ರಾಮದವರನ್ನು ಮತದಾನ ಮಾಡುವಂತೆ ಪ್ರೋತ್ಸಾಹಿಸಬೇಕು ಅವರಲ್ಲಿ ಮತದಾನ ಕುರಿತು ಅರಿವು ಮೂಡಿಸಿ ಅವರು ಮತ ಚಲಾಯಿಸುವಂತೆ ಮಾಡಬೇಕು ಎಂದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಬಿ. ಕರುಣಾಕರ್ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ತಮ್ಮ ಗ್ರಾಮ ವ್ಯಾಪ್ತಿಯಲ್ಲಿ ಪ್ರತಿಯೊಬ್ಬರು ಮನೆ ಮನೆಗೆ ಭೇಟಿ ನೀಡಿ ಜಿಲ್ಲಾಧಿಕಾರಿಗಳ ಮನವಿ ಪತ್ರವನ್ನು ತಲುಪಿಸುವುದರೊಂದಿಗೆ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕೆಂದರು.
ಪ್ರತಿಜ್ಞಾ ವಿಧಿ: ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿ ಲಕ್ಷ್ಮಣ ನಾಯಕ್, ಅಂಗನವಾಡಿ ಕಾರ್ಯಕರ್ತರಿಗೆ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋಪಾಲ್ ಕೃಷ್ಣ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಬಿ. ಮಂಜುನಾಥ, ಶಿಶು ಅಭಿವೃದ್ಧಿ ಅಧಿಕಾರಿ ವೆಂಕಟೇಶ್, ಸ್ವಾಪ್ ಸಂಪನ್ಮೂಲ ವ್ಯಕ್ತಿ ಓಂಕಾರಪ್ಪ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

