ಚಿಕ್ಕಮಗಳೂರು

ಸಾಬೀತಾದರೆ ರಾಜಕೀಯ ನಿವೃತ್ತಿ

Published On :

ಕ.ಪ್ರ.ವಾರ್ತೆ ್ಣ ಚಿಕ್ಕಮಗಳೂರು ್ಣ ಏ. 11
ಅಡಕೆ ನಿಷೇಧ ಕುರಿತು ಕೇಂದ್ರ ಸರ್ಕಾರ ಸುಪ್ರಿಂಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿರುವ ಬಗ್ಗೆ ಸಾಬೀತುಪಡಿಸಿದರೆ ತಾವು ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಸವಾಲು ಹಾಕಿದ್ದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರಿಗೆ ಶಾಸಕ ಸಿ.ಟಿ.ರವಿ ಅವರು, ಕೇಂದ್ರ ಸರ್ಕಾರ ಪ್ರಮಾಣಪತ್ರ ಸಲ್ಲಿಸಿಲ್ಲ ಎಂಬುದು ಸಾಬೀತುಪಡಿಸಿದರೆ ತಾವು ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಪ್ರತಿ ಸವಾಲ್ ಹಾಕಿದ್ದಾರೆ.
ಅಡಕೆಯಲ್ಲಿ ವಿಷಕಾರಕ ವಸ್ತುಗಳಿವೆ ಎಂಬುದಾಗಿ ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಇಂದಿರಾ ಜೈಸಿಂಗ್ ಸುಪ್ರೀಂಕೋರ್ಟ್‌ನಲ್ಲಿ ಹೇಳಿಕೆ ನೀಡಿದ್ದಾರೆ.
ಸರ್ಕಾರದ ವಕೀಲರು ನ್ಯಾಯಾಲಯದಲ್ಲಿ ಹೇಳಿರುವುದು ಲಿಖಿತವಾಗಿ ದಾಖಲಾಗಲಿದೆ. ಇದನ್ನು ಜಯಪ್ರಕಾಶ್ ಹೆಗ್ಡೆ ಅಲ್ಲಗೆಳೆಯುತ್ತಿರುವುದರಲ್ಲಿ ಅರ್ಥವಿಲ್ಲ. ಇದನ್ನು ಅವರು ಸಾಬೀತುಪಡಿಸಿದರೆ ಇನ್ನು ರಾಜಕೀಯದಲ್ಲಿ ಭವಿಷ್ಯ ಇರುವ ತಾವು ನಿವೃತ್ತಿ ಹೊಂದುವುದಾಗಿ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಯಾವುದೇ ಒತ್ತುವರಿ ಭೂಮಿ ತೆರವುಗೊಳಿಸಿರಲಿಲ್ಲ. ಆದರೆ, ಈಗಿನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಒತ್ತುವರಿಯನ್ನು ಖುಲ್ಲಾಗೊಳಿಸುವುದಾಗಿ ಹೈಕೋರ್ಟ್‌ಗೆ ಲಿಖಿತವಾಗಿ ತಿಳಿಸಿದೆ.
ಇದರ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆ ಒತ್ತುವರಿದಾರರನ್ನು ಖುಲ್ಲಾಗೊಳಿಸಲಾಗಿದೆ. ತಮ್ಮ ಪಕ್ಷ ಒತ್ತುವರಿದಾರರ ಪರವಾಗಿದೆ ಎಂಬುದಾಗಿ ಭಾವಿಸಬಾರದು. ಜೀವನಕ್ಕಾಗಿ ಅಲ್ಪಸ್ವಲ್ಪ ಒತ್ತುವರಿ ಮಾಡಿಕೊಂಡವರನ್ನು ಖುಲ್ಲಾಗೊಳಿಸಬಾರದು. ಬಿಜೆಪಿ, ಮಿತಿಯನ್ನು ಆಧರಿಸಿ ಒತ್ತುವರಿದಾರರ ಹಾಗೂ ಅಡಕೆ ಬೆಳೆಗಾರರ ಹಿತರಕ್ಷಣೆಗೆ ಬದ್ಧ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ನಗರಸಭಾ ಅಧ್ಯಕ್ಷ ಪುಷ್ಪರಾಜ್, ಮಾಜಿ ಅಧ್ಯಕ್ಷ ಎಚ್.ಡಿ.ತಮ್ಮಯ್ಯ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.