ಚಿಕ್ಕಮಗಳೂರು

ಮೋದಿ ಸಿದ್ಧಾಂತ ಪ್ರಜಾಪ್ರಭುತ್ವ ವಿರೋಧಿ: ಆರೋಪ

Published On :

ಕಡೂರು: ಹಾಸನ ಮತ್ತು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಗಳಲ್ಲಿ ಗೊಂದಲ ಹಾಗೂ ವ್ಯಕ್ತಿಗತ ಚರ್ಚೆಗಳಿಗೆ ಮಾನ್ಯತೆ ನೀಡುತ್ತಿರುವ ಲಾಭವು ಕಾಂಗ್ರೆಸ್ ಪಕ್ಷಕ್ಕೆ ಆಗುವ ಮೂಲಕ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲವು ಸಾಧಿಲಿದ್ದಾರೆ ಎಂದು ಪಕ್ಷದ ಜಿಲ್ಲಾ ಮಾಧ್ಯಮ ವಕ್ತಾರ ಎ.ಎನ್. ಮಹೇಶ್ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೋದಿ ಸಿದ್ಧಾಂತವು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಗುಜರಾತ್ ಮಾದರಿ ಆಡಳಿತವನ್ನು ದೇಶಕ್ಕೆ ನೀಡುತ್ತೇವೆ ಎಂದು ಹೇಳುತ್ತಿರುವ ಮೋದಿ ಕರ್ನಾಟಕ ಮಾದರಿ ಆಡಳಿತ ನೀಡುತ್ತೇವೆ ಎಂದು ಏಲ್ಲೂ ಏಕೆ ಹೇಳುತ್ತಿಲ್ಲ. ಅದನ್ನು ಹೇಳಲು ಮೋದಿಗೆ ಗುಂಡಿಗೆ ಬೇಕು. ಬಿಜೆಪಿಯಲ್ಲಿ ಮೋದಿಗಾಗಿ ಮತ ಕೇಳುತ್ತಿದ್ದಾರೆಯೇ ಹೊರತು ಬಿಜೆಪಿಗೆ ಮತ ಕೇಳುವ ರಾಜಕೀಯ ಮಾಡುತ್ತಿಲ್ಲ. ಮಾಧ್ಯಮಗಳಿಂದ ಕೇವಲ ವೈಭವೀಕರಣ ನಡೆಯುತ್ತಿದೆ. ಆದರೆ, ಒಂದು ಸರ್ವೆ ಪ್ರಕಾರ ಗುಜರಾತಿನಲ್ಲಿ ಅತಿ ಹೆಚ್ಚು ಶಿಶುಮರಣ ನಡೆಯುತ್ತಿದೆ. ಯಾವ ಉದ್ಯೋಗ ಸೃಷ್ಟಿ ನಡೆದಿಲ್ಲ. ಗುಜರಾತಿನ ನರಮೇಧ ಜನರಿಗೆ ಗೊತ್ತಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಉತ್ತಮ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.
ವೆಂಕಟೇಶ್ ನಾಯ್ಡು, ಬಾಸೂರು ಚಂದ್ರಮೌಳಿ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.