ಸಮಾನತೆಗೆ ಹೋರಾಡಿದ ಅಂಬೇಡ್ಕರ್
ಚಿಕ್ಕಮಗಳೂರು: ಅಸಮಾನತೆ ತೊಲಗಿಸುವ ನಿಟ್ಟಿನಲ್ಲಿ ಸಾಮಾಜಿಕ ಸಮಾನತೆ ಪರವಾಗಿ ಹೋರಾಟ ಮಾಡಿದವರಲ್ಲಿ ಅಂಬೇಡ್ಕರ್ ಅಗ್ರಗಣ್ಯರು. ಅವರು ಅನುಸರಿಸಿದ ದಾರಿ ನಮಗೆಲ್ಲಾ ಅನುಕರಣೀಯ ಎಂದು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಎಂ.ಎಸ್. ಬೋಜೇಗೌಡ ಹೇಳಿದರು.
ಪಕ್ಷದ ಕಚೇರಿಯಲ್ಲಿ ನಡೆದ ಅಂಬೇಡ್ಕರ್ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ಜೀವನದಲ್ಲಿ ಕ್ಷಣಕ್ಷಣಕ್ಕೂ ಕಷ್ಟಕಾರ್ಪಣ್ಯ ಎದುರಾದರೂ ಹೋದ ಕಡೆಗಳಲ್ಲಿ ಅವಮಾನಗಳಿಗೆ ಗುರಿಯಾದರೂ ಧರ್ಮದ ದಾರಿಯಲ್ಲಿ ನಡೆದು ಸಮಾಜಕ್ಕೆ ಮಾದರಿಯಾದ ವ್ಯಕ್ತಿ ಡಾ.ಅಂಬೇಡ್ಕರ್ ಎಂದರು.
ತಾಪಂ ಉಪಾಧ್ಯಕ್ಷ ಎಚ್.ಎಸ್. ಪುಟ್ಟೇಗೌಡ, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಕೆ.ಪಿ. ವೆಂಕಟೇಶ್ ಮಾತನಾಡಿದರು.
ಜಿಲ್ಲಾ ವಕ್ತಾರ ಎಚ್.ಡಿ. ತಮ್ಮಯ್ಯ, ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಎನ್. ರವಿ, ಜಿಲ್ಲಾ ಉಪಾಧ್ಯಕ್ಷ ಕೋಟೆ ರಂಗನಾಥ್, ಕನಕರಾಜ್ ಅರಸ್, ಜಿಲ್ಲಾ ಕಾರ್ಯದಶಿ ಹಂಪಯ್ಯ, ರವೀಂದ್ರ ಬೆಳವಾಡಿ, ಬೀಕನಹಳ್ಳಿ ಸೋಮಶೇಖರ್, ಬಸವರಾಜು ಸಾದರಹಳ್ಳಿ, ಗ್ರಾಮಾಂತರ ಎಸ್.ಸಿ. ಮೋರ್ಚಾ ಅಧ್ಯಕ್ಷ ನಲ್ಲೂರು ಜಯಣ್ಣ, ನಗರ ಎಸ್.ಸಿ. ಮೋರ್ಚಾ ಅಧ್ಯಕ್ಷ ರಾಜ್ಕುಮಾರ್ ಹಿರೇಮಗಳೂರು, ಜಾನಯ್ಯ, ಜಗದೀಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

