ಚಿಕ್ಕಮಗಳೂರು

ಸಂಘಟನೆಗಳ ಮತದಾನ ಜಾಗೃತಿ ಜಾಥಾ

Published On :

ನರಸಿಂಹರಾಜಪುರ: ಮುತ್ತಿನಕೊಪ್ಪ ಸೂರ್ಯೋದಯ ಜನಜಾಗ್ರತಿ ವೇದಿಕೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಜೇಸಿ ಸಂಸ್ಥೆ, ತಾಲೂಕು ಪತ್ರಕರ್ತರ ಸಂಘ, ಪ್ರತಿಧ್ವನಿ ಸಂಸ್ಥೆ, ಆಟೋ ಚಾಲಕರ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮತದಾನ ಜಾಗೃತಿ ಜಾಥಾ ಶನಿವಾರ ಬಸ್ತಿಮಠದಿಂದ ಪ್ರವಾಸಿ ಮಂದಿರದವರೆಗೆ ನಡೆಯಿತು.
ಬಸ್ ನಿಲ್ದಾಣದಲ್ಲಿ ನಡೆದ ಸಭೆಯಲ್ಲಿ ವೇದಿಕೆ ಅಧ್ಯಕ್ಷ ಮನೋಹರ್ ಮಾತನಾಡಿ, ಎಲ್ಲಾ ಜನಪ್ರತಿನಿಧಿಗಳು ಪ್ರಾರಂಭದ ಹಂತದಲ್ಲಿ ಭ್ರಷ್ಚರಾಗಿರುವುದಿಲ್ಲ. ನಂತರದ ದಿನಗಳಲ್ಲಿ ಹಣ ಮಾಡುವ ಹಪಾಹಪಿಯಲ್ಲಿ ಭ್ರಷ್ಟರಾಗುತ್ತಾರೆ. ಭ್ರಷ್ಟ ರಾಜಕಾರಣಿಗಳನ್ನು ಆಯ್ಕೆ ಮಾಡಿದರೆ ಅವರು ಮತ್ತಷ್ಟು ಭ್ರಷ್ಟರಾಗುತ್ತಾರೆ. ಯಾವುದೇ ಧರ್ಮ, ಜಾತಿಯ ಆಧಾರದಲ್ಲಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬಾರದು. ಇತ್ತೀಚಿನ ವರ್ಷಗಳಲ್ಲಿ ವಿದ್ಯಾವಂತರೇ ಮತದಾನದಲ್ಲಿ ಭಾಗವಹಿಸುತ್ತಿಲ್ಲ ಎಂದು ವಿಷಾದಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ. ಕೆ.ಉಮೇಶ್ ಮಾತನಾಡಿ, ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು. ಸಾಧ್ಯವಾದಷ್ಟು ಭ್ರಷ್ಟರಲ್ಲದ ಅಭ್ಯರ್ಥಿಗೆ ಮತ ನೀಡಿ ಎಂದು ಸಲಹೆ ನೀಡಿದರು.
ಸಭೆಯಲ್ಲಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪುರುಶೋತ್ತಮ್, ಜೇಸಿ ಸಂಸ್ಥೆ ಅಧ್ಯಕ್ಷ ಅಕ್ಷತ್, ಪ್ರತಿಧ್ವನಿ ಸಂಸ್ಥೆಯ ಅಧ್ಯಕ್ಷ ಪ್ರದೀಪ್, ಅಭಿನವ ವೇದಿಕೆ ಅಧ್ಯಕ್ಷ ಅಭಿನವ ಗಿರಿರಾಜ್, ಜೇಸಿ ನಿಕಟಪೂರ್ವ ಅಧ್ಯಕ್ಷ ವರ್ಕಾಟೆ ಸುಧಾಕರ್, ಜೇಸಿ ಸಂಸ್ಥೆ ಉಪಾಧ್ಯಕ್ಷ ಎನ್.ಎ. ಶೇಖಬ್ಬ, ಯುವ ಚೇತನ ಸಂಸ್ಥೆಯ ಲೋಬೋ ಮುಂತಾದವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.