ಚಿಕ್ಕಮಗಳೂರು

ಕೇಂದ್ರದಲ್ಲಿ ಕಾಂಗ್ರೆಸ್ ಚುಕ್ಕಾಣಿ: ವಿಶ್ವಾಸ

Published On :

ಕ.ಪ್ರ.ವಾರ್ತೆ, ಬಾಳೆಹೊನ್ನೂರು, ಏ. 18
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಯೋಜನೆಗಳಿಂದಾಗಿ ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಶೃಂಗೇರಿ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಶಹಾಬ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೇಂದ್ರದ ಯುಪಿಎ ಸರ್ಕಾರವು ತನ್ನ ಅಧಿಕಾರವಧಿಯಲ್ಲಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. 2009 ರಿಂದ ಈಚೆಗೆ ಉನ್ನತ ಶಿಕ್ಷಣಕ್ಕಾಗಿ ಪಡೆದ ಸಾಲವನ್ನು ಬಡ್ಡಿ ಸಮೇತವಾಗಿ ಮನ್ನಾ ಮಾಡಿದೆ. ಅವರ ಹಿಂದಿನ ಅವಧಿಯ ಸಾಲದ ಬಡ್ಡಿ ಮನ್ನಾ ಮಾಡುವ ಮೂಲಕ ಉನ್ನತ ವ್ಯಾಸಂಗಕ್ಕೆ ಹೆಚ್ಚು ಅನುಕೂಲ ಕಲ್ಪಿಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದರು.
ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಯೋಜನೆ, ಮಾಹಿತಿ ಹಕ್ಕು ಕಾಯ್ದೆ, ಉಚಿತ ಶಿಕ್ಷಣ ಹಕ್ಕು ಕಾಯ್ದೆ, ರಾಜೀವ್ ಗಾಂಧಿ ವಿದ್ಯುತ್ ಯೋಜನೆ, ವಸತಿ ಯೋಜನೆ ಸೇರಿದಂತೆ ಕಾರ್ಯಕ್ರಮಗಳು ಜನಸಾಮಾನ್ಯರ ಮನ ಮುಟ್ಟುವಲ್ಲಿ ಯಶಸ್ವಿಯಾಗಿದೆ ಎಂದರು.
ಅಧಿಕ ಮತ:  ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ಬೇಸತ್ತು ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಚುನಾಯಿಸಿದ ನಂತರ ಕ್ಷೀರಭಾಗ್ಯ, ಬಿದಾಯಿ ಯೋಜನೆ, ಅಂಗವಿಕಲ, ವಿಧವಾ ವೇತನ ಹೆಚ್ಚಳ ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದು ಬಡವರ ಪರ ಕಾರ್ಯನಿರ್ವಹಿಸಿದೆ. ಈ ಎಲ್ಲಾ ಜನಪರ ಯೋಜನೆಗಳಿಂದಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅಧಿಕ ಮತಗಳಿಂದ ಜಯಗಳಿಸಲಿದ್ದಾರೆ ಎಂದರು.
ಕಾಂಗ್ರೆಸ್ ಮುಖಂಡರಾದ ಜಂಶೀದ್ ಅಹಮ್ಮದ್, ಮಾವಿನಕಟ್ಟೆ ನವೀನ್, ಮಹಮ್ಮದ್ ಆಲಿ, ನವೀನ್ ರಪಾಯಲ್, ಫೌಜಲ್, ಮುದುಗುಣಿ ಸದಾಶಿವ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.