ಚಿಕ್ಕಮಗಳೂರು

ಸ್ವೀಪ್ ಜಾಗೃತಿ: ಹೆಚ್ಚಿದ ಮತದಾನ

Published On :

ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಏ. 18
ಮತದಾನ ಪ್ರಮಾಣ ಹೆಚ್ಚು ಮಾಡುವ ನಿಟ್ಟಿನಲ್ಲಿ ಕೇಂದ್ರ ಚುನಾವಣೆ ಆಯೋಗದ ಸೂಚನೆ ಮೇರೆಗೆ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಿಕೆ ಯೋಜನೆ (ಸ್ವೀಪ್) ವತಿಯಿಂದ ಮತದಾರರಲ್ಲಿ ಜಾಗೃತಿ ಮೂಡಿಸಲು ಕಳೆದ ಮಾರ್ಚ್ 5ರಿಂದ ಜಿಲ್ಲಾದ್ಯಂತ ಕಾರ್ಯಕ್ರಮ ರೂಪಿಸಿದರ ಹಿನ್ನೆಲೆಯಲ್ಲಿ ಮತದಾರರು ಮತದಾನದಲ್ಲಿ ತೊಡಗಿದ ಪರಿಣಾಮ ಒಟ್ಟಾರೆ ಮತದಾನದಲ್ಲಿ ಶೇಕಡಾವಾರು ಪ್ರಗತಿ ಸಾಧಿಸಲಾಗಿದೆ ಎಂದು ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಬಿ. ಕರುಣಾಕರ್ ತಿಳಿಸಿದ್ದಾರೆ.
ಕೆಲವು ಹೆಸರುಗಳು ಮತದಾರರ ಪಟ್ಟಿಯಲ್ಲಿ ಇಲ್ಲದಿರುವುದು ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ಜನವರಿ 1 ಕ್ಕೆ 18 ವರ್ಷ ಮೇಲ್ಪಟ್ಟರವರ ಹೆಸರು ಸೇರ್ಪಡೆಗೊಳಿಸುವಲ್ಲಿ ಮೊದಲ ಹಂತದಲ್ಲಿ ಕಾರ್ಯಕ್ರಮ ರೂಪಿಸಲಾಗಿದ್ದು, ಇದರ ಅನ್ವಯ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ 23,454 ಹೊಸದಾಗಿ ಸೇರ್ಪಡೆಗೊಂಡಿದ್ದವು. ಎರಡನೇ ಹಂತದಲ್ಲಿ ವಿವಿಧ ಸಂಘ- ಸಂಸ್ಥೆ, ಸ್ವಯಂಸೇವಾ ಸಂಸ್ಥೆಗಳಿಂದ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಮತದಾನದ ಬಗ್ಗೆ ಜಾಗೃತಿ, ಪ್ರತಿಜ್ಞಾ ವಿಧಿ ಬೋಧನೆ, ಕರಪತ್ರಗಳ ಹಂಚಿಕೆ, ಬಸ್ ನಿಲ್ದಾಣ ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಬೀದಿ ನಾಟಕ, ಹೆದ್ದಾರಿ ಫಲಕಗಳು ಹಾಗೂ ಇತರೆ ಪ್ರಚಾರದ ಮೂಲಕ ಅರಿವು ಮೂಡಿಸುವುದರ ಪರಿಣಾಮ ಹಾಗೂ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಾಗಾರ, ವಿವಿಧ ಸ್ಪರ್ಧೆಗಳು, ಸಹಿ ಸಂಗ್ರಹ ಅಭಿಯಾನ, ಜಾಥಾ ಕಾರ್ಯಕ್ರಮ ಹಾಕಿಕೊಂಡ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 70.46 ರಷ್ಟು ಮತದಾನವಾಗಿದೆ.
ಕಳೆದ 2009ರ ಚುನಾವಣೆಯಲ್ಲಿ ಶೇ. 68.18 ಹಾಗೂ 2012 ರ ಲೋಕಸಭಾ ಉಪ ಚುನಾವಣೆಯಲ್ಲಿ ಶೇ. 68.11 ಮತದಾನವಾಗಿದ್ದು, ಈ ಬಾರಿ ಶೇ. 70.46 ಮತದಾನವಾಗಿದೆ.
ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಮತದಾರರಿಗೆ ಹಾಗೂ ಸ್ವೀಪ್ ಸಮಿತಿಯ ಸದಸ್ಯರಿಗೆ, ಸ್ವಯಂಸೇವಾ ಸಂಸ್ಥೆ, ಎಲ್ಲಾ ಸಂಘ ಸಂಸ್ಥೆ ಹಾಗೂ ವಿವಿಧ ಇಲಾಖೆಯ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಕೃತಜ್ಞತೆಯನ್ನು ಎಂದು ಸ್ವೀಪ್ ಸಮಿತಿಯ ಅಧ್ಯಕ್ಷರು ಸಲ್ಲಿಸಿದ್ದಾರೆ.
ಶೇಕಡಾವಾರು ಮತದಾನ ಹೆಚ್ಚಳವಾಗುವಲ್ಲಿ ಸಹಕರಿಸಿದ ಎಲ್ಲಾ ಸಿಬ್ಬಂದಿ ವರ್ಗದವರಿಗೆ, ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಹಾಗೂ ವಾರ್ತಾಧಿಕಾರಿ ಬಿ. ಮಂಜುನಾಥ್ ಅವರು ಧನ್ಯವಾದ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.