ಕಾಂಗ್ರೆಸ್ ಅಭ್ಯರ್ಥಿಗೆ ಗೆಲವು: ವಿಶ್ವಾಸ
ಕ.ಪ್ರ.ವಾರ್ತೆ ್ಣ ಮೂಡಿಗೆರೆ ್ಣ ಏ. 20
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಂಬುಗೆಯ ಮತದಾರರು ಕೈ ಮೇಲೆತ್ತುವುದರಲ್ಲಿ ಸಂದೇಹವಿಲ್ಲ. ಮತದಾನದಲ್ಲಿ ಪಾಲ್ಗೊಂಡಿರುವ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಕಾಂಗ್ರೆಸ್ ವಕ್ತಾರ, ಜಿ.ಪಂ. ಸದಸ್ಯ ಎಂ.ಎಸ್. ಅನಂತ್ ತಿಳಿಸಿದ್ದಾರೆ.
ಮೂಡಿಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅತ್ಯಧಿಕ ಅಂತರದ ಲೀಡ್ ಪಡೆಯಲಿದೆ. ಮತದಾರರು ಪ್ರಜ್ಞಾವಂತಿಕೆಯಿಂದ ಮತದಾನದಲ್ಲಿ ಪಾಲ್ಗೊಂಡಿದ್ದಾರೆ. ಮತದಾರರು ಕಾಂಗ್ರೆಸ್ ಪಕ್ಷದ ಪರವಾಗಿ ಅವಿನಾಭಾವ ಸಂಬಂಧ ಹೊಂದಿದ್ದಾರೆ. ಹಣ ಬಲ, ತೋಳ್ಬಲ ಮತ್ತು ಆಮಿಷಗಳಿಗೆ ಬಲಿಯಾಗದೇ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರ ಸರಳ, ಸಜ್ಜನಿಕೆ, ಪ್ರಾಮಾಣಿಕತೆ, ಪರಿಶ್ರಮ ಪಡುವ ವ್ಯಕ್ತಿತ್ವವನ್ನು ನೋಡಿ ಮತ ಚಲಾಯಿಸಿದ್ದಾರೆ. ಹೀಗಾಗಿ, 1 ಲಕ್ಷಕ್ಕೂ ಅಧಿಕ ಮತಗಳ ಅಂತರದ ಗೆಲವು ನಿಸ್ಸಂದೇಹವಾಗಿ ಲಭಿಸಲಿದೆ ಎಂದಿದ್ದಾರೆ.
ದೇಶದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಮತ್ತೆ ಮುಂದುವರಿಯಲು ಮತದಾರರು ಅವಕಾಶ ನೀಡುವುದರಲ್ಲಿ ಎರಡು ಮಾತಿಲ್ಲ. ಪ್ರಾಮಾಣಿಕವಾಗಿ ಜನರ ಸೇವೆ ಮಾಡುವ ಕಾಂಗ್ರೆಸ್ಸಿಗರಿಗೆ ಯಾವುದೇ ಪಕ್ಷಗಳ ಪೈಪೋಟಿಯೇ ಇಲ್ಲ. ಕೆಲವರು ಹಣ ಮತ್ತು ತೋಳ್ಬಲ ಬಳಸಿ ಗೆಲ್ಲಲು ಸಂಚು ರೂಪಿಸಿದ್ದರು. ಆದರೆ ಅವರಿಗೆ ಮತದಾರರು ತಕ್ಕ ಪಾಠ ಕಲಿಸಲು ಪ್ರಯತ್ನಿಸಿದ್ದಾರೆ.
ಕಾಂಗ್ರೆಸ್‌ನಲ್ಲಿ ತತ್ವ, ಸಿದ್ಧಾಂತ, ನಂಬಿಕೆಗಳ ಸಹಿತ ಉತ್ತಮ ನಾಯಕತ್ವ ಸೇವಾ ಮನೋಭಾವ ಹೊಂದಿರುವ ಹಿನ್ನೆಲೆಯಲ್ಲಿ ಜನರು ಕಾಂಗ್ರೆಸ್ ಕೈ ಬಿಡಲು ಎಂದಿಗೂ ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

