ಏಕರೂಪ ವೇತನ ಸೌಲಭ್ಯ ನೀಡಲು ರಾಜ್ಯ ಸರ್ಕಾರಕ್ಕೆ ಆಗ್ರಹ
ಕ.ಪ್ರ.ವಾರ್ತೆ ಚಿಕ್ಕಮಗಳೂರು ಏ. 21
ಏಕರೂಪ ಶಿಕ್ಷಣ ಪದ್ಧತಿಯಂತೆ ಏಕರೂಪ ವೇತನ ಸೌಲಭ್ಯವನ್ನು ಜಾರಿಗೆ ತರುವಂತೆ ರಾಜ್ಯ ಶಿಕ್ಷಕರ ಸಂಘದ ಮಾಜಿ ಸಂಘಟನಾ ಕಾರ್ಯದರ್ಶಿ ಕೆ.ಕೆ. ಮಂಜುನಾಥ್ ಕುಮಾರ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ನಿರಂತರ ಸಮೃದ್ಧ ಮೌಲ್ಯಮಾಪನ (ಸಿಸಿಇ) ಪದ್ಧತಿ ಅಪ್ರಸ್ತುತ, ಅವೈಜ್ಞಾನಿಕ, ಅನುಪಯುಕ್ತವಾಗುತ್ತದೆ. ಅದುದರಿಂದ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹಾಗೂ ಶಿಕ್ಷಕರಿಗೆ ಅನಗತ್ಯ ಹೊರೆಯಾಗಿರುತ್ತದೆ. ಅದ್ದರಿಂದ 1/40 ಅನುಪಾತ ಕಾರ್ಯರೂಪಕ್ಕೆ ಬರುವವರೆಗೆ ಸಿಸಿಇ ಪದ್ಥತಿಯನ್ನು ಕೈಬಿಡಬೇಕೆಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ಒತ್ತಾಯಿಸಿದರು.
ಎಸ್‌ಎಸ್‌ಎಸ್‌ಸಿ ಮತ್ತು ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನವನ್ನು ರಜಾ ಅವಧಿಯಲ್ಲಿ ಮಾಡುವುದರಿಂದ ಒಟ್ಟು 30 ಗಳಿಕೆ ರಜೆಯನ್ನು ಶಿಕ್ಷಕರಿಗೆ ನೀಡಬೇಕು. ಪ್ರೌಢಶಾಲಾ ಶಿಕ್ಷಕರಿಂದ ಮುಖ್ಯ ಶಿಕ್ಷಕರ ಹಾಗೂ ಉಪನ್ಯಾಸರ ಹುದ್ದೆಗೆ ಮತ್ತು ಉಪನ್ಯಾಸಕರಿಂದ ಪ್ರಾಂಶುಪಾಲರ ಹಾಗೂ ಪದವಿ ಶಿಕ್ಷಣಕ್ಕೆ ಪ್ರತೀ ವರ್ಷವೂ ನಿರಂತರ ಬಡ್ತಿ ನೀಡಬೇಕು.
ಅನುದಾನಿತ ಶಾಲಾ, ಕಾಲೇಜುಗಳ ಶಿಕ್ಷಕರು ವರ್ಗಾವಣೆ ಹೊಂದಿದ ನಂತರವೂ ಜೇಷ್ಠತೆ ಹಾಗೂ ಇತರೆ ಸೌಲಭ್ಯ ನೀಡಬೇಕು. ಸರ್ಕಾರಿ ಶಾಲಾ ನೌಕರರಿಗೆ ನೀಡುತ್ತಿರುವ ಹೊಸ ಪಿಂಚಣಿ ಯೋಜನೆಯನ್ನು ಅನುದಾನಿತ ನೌಕರರಿಗೂ ಕೂಡಲೇ ವಿಸ್ತರಿಸಬೇಕು.
ಅಕ್ಷರ ದಾಸೋಹ, ಕ್ಷೀರ ಭಾಗ್ಯ ಯೋಜನೆ ಮತ್ತು ಇತರೆ ಜವಾಬ್ದಾರಿಗಳಿಂದ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರನ್ನು ಮುಕ್ತಗೊಳಿಸಬೇಕು. ಎನ್‌ಜಿಒಗಳಿಗೆ ಈ ಜವಾಬ್ದಾರಿ ವಹಿಸಬೇಕು. ಪ್ರತಿ ಶಾಲೆಗೆ ರಾತ್ರಿ ಕಾವಲುಗಾರರನ್ನು ನೇಮಿಸಬೇಕೆಂದು ಆಗ್ರಹಿಸಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

