ಸನ್ಮಾನ ಸಮಾರಂಭ
ಶಿವಮೊಗ್ಗ- ಶಿವಮೊಗ್ಗ ಜಿಲ್ಲಾ ನಿವೃತ್ತಿ ನೌಕರರ ಸಂಘವು 2013ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಹಿರಯ ಸದಸ್ಯರಿಗೆ ಸನ್ಮಾನ ಸಮಾರಂಭವನ್ನು ಏಪ್ರಿಲ್ 26ರಂದು ಹಮ್ಮಿಕೊಂಡಿದೆ. ಅಂದು ಬೆಳಿಗ್ಗೆ 10.30ಕ್ಕೆ ಬಸವನಗುಡಿಯ ಶ್ರೀ ಶೈಲ ಮಲ್ಲಿಕಾರ್ಜುನ ಸಭಾ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಂಘದ ಸದಸ್ಯರು ಗುರುತು ಪತ್ರದೊಂದಿಗೆ ಹಾಜರಾಗ ುವಂತೆ ಸೂಚಿಸಲಾಗಿದೆ. ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಸಿಕಾಂತ್ ಸೆಂಥಿಲ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಲಕ್ಷ್ಮೀಕಾಂತಮ್ಮ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಡಾ. ಸಂಜಯ್ ಉಪಸ್ಥಿತರಿರಲಿದ್ದು, ಎಸ್.ಎಂ.ಜಯದೇವಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಸಿ.ಎಚ್.ಚಂದ್ರಶೇಖರಪ್ಪ ತಿಳಿಸಿದ್ದಾರೆ.
ಸಮಾರೋಪ
ಶಿವಮೊಗ್ಗ- ಸದ್ಯಾದ್ರಿ ವಿಜ್ಞಾನ ಕಾಲೇಜಿನ ಸಹ್ಯಾದ್ರಿ ವಿಜ್ಞಾನ ಪರಿಷತ್ ಮತ್ತು ಕ್ರೀಡಾ ಸಮಾರೋಪವು ಏ.22ರಂದು ಬೆಳಿಗ್ಗೆ 10ಗಂಟೆಗೆ ಕಾಲೇಜಿನ ಒಳಾಂಗಣದಲ್ಲಿ ನಡೆಯಲಿದೆ. ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ವಾಸುದೇವಪ್ಪ ಸಮಾರೋಪ ಭಾಷಣ ಮಾಡಲಿದ್ದು, ಸ್ನೇಕ್ ಕಿರಣ್ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುತ್ತಿದೆ. ಮುಖ್ಯ ಅತಿಥಿಯಾಗಿ ಎಸ್.ವಿ.ಶಾಸ್ತ್ರಿ, ಎಚ್.ಜಯದೇವಪ್ಪ ಪಾಲ್ಗೊಳ್ಳುವರು. ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಜಿ.ಶಕುಂತಲ ಅಧ್ಯಕ್ಷತೆ ವಹಿಸಲಿದ್ದಾರೆ. ನಂತರ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಅಂಬೇಡ್ಕರ್ ಜಯಂತಿ
ಶಿವಮೊಗ್ಗ- ಸಹ್ಯಾದ್ರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿ ಸಾಂಸ್ಕೃತಿಕ ಸಂಘವು ಏ.22ರಂದು ಅಂಬೇಡ್ಕರ್ ಜಯಂತಿ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕಾಲೇಜಿನ ನೂತನ ಕಟ್ಟಡದ ಕೊಠಡಿ 12ರಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಜಯದೇವಪ್ಪ ವಹಿಸಲಿದ್ದು, ಹರಿಹರ ಎಸ್ಜೆವಿಪಿ ಸ್ವಾಯತ್ತ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಎ.ಬಿ.ರಾಮಚಂದ್ರಪ್ಪ ಉಪನ್ಯಾಸ ನೀಡಲಿದ್ದಾರೆ. ವಿದ್ಯಾರ್ಥಿ ಸಾಂಸ್ಕೃತಿಕ ಸಂಘದ ಸಂಚಾಲಕ ಪ್ರೊ.ಜಿ.ಎಸ್.ಚಂದ್ರಮೌಳಿ ಉಪಸ್ಥಿತರಿರುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

