ಚಿಕ್ಕಮಗಳೂರು

ಸಿಬಿಐ ತನಿಖೆಗೆ ವಹಿಸಲು ಆಗ್ರಹ

Published On :

ಮೂಡಿಗೆರೆ:  ಇಲ್ಲಿಗೆ ಸಮೀಪದ ತನಿಕೋಡು ಅರಣ್ಯ ತಪಾಸಣಾ ಠಾಣೆ ಬಳಿ ಅಮಾಯಕ ಯುವಕರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಮುಸ್ಲಿಂ ಸಂಘಟನೆಗಳ ಒಕ್ಕೂಟ ಸೋಮವಾರ ತಹಸೀಲ್ದಾರ್ ಎನ್.ಕೆ.ಶಾರದಾಂಬ ಅವರ ಮೂಲಕ ರಾಜ್ಯಪಾಲರಿಗೆ ಮತ್ತು ಸರ್ಕಾರಕ್ಕೆ ಮನವಿ ಸಲ್ಲಿಸಿತು.  
ರು. 50 ಲಕ್ಷ ಪರಿಹಾರ ನೀಡಿ: ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ತಪ್ಪಿತಸ್ಥ ನಕ್ಸಲ್ ನಿಗ್ರಹ ಪಡೆಯವರನ್ನು ಕೆಲಸದಿಂದ ವಜಾಗೊಳಿಸಿ ಅವರನ್ನು ಬಂಧಿಸಬೇಕು. ಹಾಗೂ ಮೃತನ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಬೇಕು. ಕುಟುಂಬಕ್ಕೆ ಸೂಕ್ತ ಭದ್ರತೆಯನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.  
ವಿವಿಧ ಸಂಘಟನೆಗಳ ಮುಖಂಡರಾದ ಸಿ.ಕೆ.ಇಬ್ರಾಹಿಂ, ಅಕ್ರಮ್ ಹಾಜಿ, ಕಿರುಗುಂದ ಅಬ್ಬಾಸ್, ಮೊಹಿಯುದ್ದೀನ್ ಸೇಠ್, ಅಹಮದ್ ಬಾವ, ಗೌಸ್ ಮೊಹಿಯುದ್ದೀನ್, ಹಸನಬ್ಬ, ಅಬ್ದುಲ್ ರಝಾಕ್, ಉಮ್ಮರ್ ಬಣಕಲ್, ಅಬ್ದುಲ್ ಖಾದರ್, ಉಮ್ಮರ್ ಹಂಡುಗುಳಿ, ಇಸ್ಮಾಯಿಲ್, ಕರೀಮ್ ಅಣಜೂರು, ಸುಲೈಮಾನ್ ಮತ್ತಿತರರು ಇದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.