ಚಿಕ್ಕಮಗಳೂರು

ಕಾರ್ಯಕ್ರಮಮುಂದೂಡಲುಆಗ್ರಹ: ಮನವಿ

Published On :

ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಏ.22
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ಬಾರಿಯ ಬಸವ ಜಯಂತಿ ಕಾರ್ಯಕ್ರಮವನ್ನು ಮುಂದೂಡುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.
ಈ ಸಂಬಂಧ ಅಪರ ಜಿಲ್ಲಾಧಿಕಾರಿ ಅರ್ಚನಾ ಅವರಿಗೆ ಯುವ ಘಟಕದ ಜಿಲ್ಲಾಧ್ಯಕ್ಷ ಬಿ.ಬಿ. ಪವನ್ ಅವರು ಮಂಗಳವಾರ ಮನವಿ ಸಲ್ಲಿಸಿದರು.
ಬಸವ ಜಯಂತಿ ಕಾರ್ಯಕ್ರಮಕ್ಕೆ ಸಂಘಟನೆಯ ಸದಸ್ಯರನ್ನು ಬಳಸಿಕೊಳ್ಳಬೇಕು. ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಸ್ವಯಂ ಸೇವಕರಾಗಿ ಆಚರಣೆಯ ಸಂದರ್ಭದಲ್ಲಿ ಕಾರ್ಯನಿರ್ವಹಿಸಲು ಬದ್ಧರಾಗಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದರು.
ಮನವಿಗೆ ಸ್ಪಂದಿಸಿದ ಅಪರ ಜಿಲ್ಲಾಧಿಕಾರಿಗಳು ಜೂನ್ 9 ರಂದು ಬಸವ ಜಯಂತಿ ಕಾರ್ಯಕ್ರಮವನ್ನು ನಡೆಸಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಪವನ್ ಅವರು ತಿಳಿಸಿದ್ದಾರೆ.
ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಘಟಕದ ರಾಜ್ಯ ಸಮಿತಿ ಸದಸ್ಯ ಚೇತನ್, ಮನೋಜ್, ಕಿರಣ್‌ಕುಮಾರ್, ಉಮೇಶ್ ಹಾಗೂ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.