ನೀರಿನ ಸಮಸ್ಯೆ ನಿವಾರಿಸಲು ರು. 50 ಲಕ್ಷ
ಚಿಕ್ಕಮಗಳೂರು: ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಎಸ್ಎಫ್ಸಿ 2013 ರ ಸಭೆಯಲ್ಲಿ ರು. 50 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ ಎಂದು ನಗರಸಭಾ ಅಧ್ಯಕ್ಷ ಕೆ.ಎಸ್. ಪುಷ್ಪರಾಜು ತಿಳಿಸಿದ್ದಾರೆ.
ಚಿಕ್ಕಮಗಳೂರು ನಗರಸಭೆಯಿಂದ ಸದರಿ ಯೋಜನೆಯಡಿ ಕೈಗೊಳ್ಳಲು ಉದ್ದೇಶಿಸಿದ ಕಾಮಗಾರಿ ಸಂಬಂಧ ಸಭೆಯಲ್ಲಿ ಸವಿವರವಾಗಿ ಚರ್ಚಿಸಲಾಯಿತು ಎಂದು ಹೇಳಿದ್ದಾರೆ. ಮಳೆ ಅಭಾವದಿಂದ ಹಾಗೂ ವಿದ್ಯುತ್ ವ್ಯತ್ಯಯದಿಂದಾಗಿ ನಗರದ ಕೆಲವು ವಾರ್ಡ್ಗಳಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, ಟ್ಯಾಂಕರ್ಗಳಿಂದ ನೀರು ಸರಬರಾಜು ಮಾಡಲಾಗುತ್ತಿದೆ.
ಇಂತಹ ವಾರ್ಡ್ಗಳಲ್ಲಿ ಹೊಸದಾಗಿ ಕೊಳವೆ ಬಾವಿ ಕೊರೆಯಿಸಿ ಮೋಟಾರ್ ಅಳವಡಿಸುವುದು ಹಾಗೂ ಅವಶ್ಯವಿರುವ ಕಡೆ ಹೆಚ್ಚುವರಿ ವಿತರಣಾ ಕೊಳವೆ ಅಳವಡಿಸುವುದರಿಂದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ನಗರದ 22 ವಾರ್ಡ್ಗಳಲ್ಲಿ ಬೋರ್ವೆಲ್ ಕೊರೆಸಿ ಮೋಟಾರ್ ಅಳವಡಿಸಲು ತಲಾ ರು. 1.75 ಲಕ್ಷದಂತೆ ನಿಗದಿಪಡಿಸಲಾಗಿದೆ.
ಒಟ್ಟು ರು. 38.50 ಲಕ್ಷ ಹಾಗೂ 12 ವಾರ್ಡ್ಗಳಲ್ಲಿ ಹಾಲಿ ಇರುವ ಬೋರ್ವೆಲ್ಗಳಿಗೆ ಫ್ಲಶಿಂಗ್ ಮಾಡಲು ತಲಾ ರು. 40 ಸಾವಿರ ನಿಗದಿಪಡಿಸಿದ್ದು ಒಟ್ಟು ರು. 4.80 ಲಕ್ಷ ಹಾಗೂ 5 ವಾರ್ಡ್ಗಳಲ್ಲಿ ಪೈಪ್ಲೈನ್ ಅಳವಡಿಸಲು ರು. 6.70 ಲಕ್ಷ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

