ಕಲಿಕಾ ಸಾಮರ್ಥ್ಯ ಗುರುತಿಸಿ ತರಬೇತಿ ಸೇರ್ಪಡೆ
ನರಸಿಂಹರಾಜಪುರ: ಶಾಲೆ ಬಿಟ್ಟ 6 ರಿಂದ 14 ವರ್ಷದ ಮಕ್ಕಳನ್ನು ಪುನಃ ಶಾಲೆಗೆ ಸೇರಿಸಿಕೊಳ್ಳಲು ಚಿಣ್ಣರ ಅಂಗಳ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್. ರಮೇಶ್ ತಿಳಿಸಿದರು.
ಪಟ್ಟಣದ ಬಸ್ತಿಮಠದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರದಿಂದ ಆರಂಭವಾದ ಚಿಣ್ಣರ ಅಂಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಚಿಣ್ಣರ ಅಂಗಳ ಕಾರ್ಯಕ್ರಮ ಸರ್ವಶಿಕ್ಷ ಅಭಿಯಾನ ಯೋಜನೆಯಡಿ ನಡೆಯುತ್ತಿರುವ ಕಾರ್ಯಕ್ರಮವಾಗಿದೆ. ಚಿಣ್ಣರ ಅಂಗಳ ತರಬೇತಿ ಜುಲೈ ತಿಂಗಳವರೆಗೂ ನಡೆಯಲಿದೆ. ಈ 3 ತಿಂಗಳ ಅವಧಿಯಲ್ಲಿ ಶಾಲಾ ಮಕ್ಕಳಿಗೆ ವಿವಿಧ ವಿಷಯದ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಅವರ ಕಲಿಕಾ ಸಾಮರ್ಥ್ಯ ಗುರುತಿಸಿ, ಅವರನ್ನು ಯಾವ ತರಗತಿಗೆ ಸೇರಿಸಿಕೊಳ್ಳಬಹುದೆಂಬುದನ್ನು ತರಬೇತಿ ಕೊನೆಯಲ್ಲಿ ನಡೆಯುವ ಪರೀಕ್ಷೆಯ ನಂತರ ನಿರ್ಧರಿಸಲಾಗುತ್ತದೆ ಎಂದರು.
ವಸತಿ ಸೌಕರ್ಯ: ಹಿಂದಿನ ಸಾಲಿನಲ್ಲಿ ಈ ಯೋಜನೆಯಡಿ ಸಂಪೂರ್ಣ ವಸತಿ ಸೌಕರ್ಯವನ್ನು ಸರ್ಕಾರ ಒದಗಿಸಿತ್ತು. ಆದರೆ, ಈ ಸಾಲಿನಲ್ಲಿ ವಸತಿ ರಹಿತ ತರಬೇತಿಯಾಗಿದೆ. ದೂರದ ಗ್ರಾಮಗಳಿಂದ ಮಕ್ಕಳು ಪ್ರತಿ ನಿತ್ಯ ಬಂದು ಹೋಗಲು ತೊಂದರೆಯಾಗುವುದರಿಂದ ದಾನಿಗಳ ನೆರವು ಪಡೆದು ಮಕ್ಕಳಿಗೆ ವಸತಿ ಒದಗಿಸಲು ಚಿಂತನೆ ನಡೆಸಲಾಗಿದೆ ಎಂದರು.
ಎನ್.ಆರ್.ಪುರ ಕ್ಲಸ್ಟರ್ ವ್ಯಾಪ್ತಿಯಲ್ಲಿ ಶಾಲೆ ಬಿಟ್ಟ 6 ಮಕ್ಕಳನ್ನು ಗುರುತಿಸಲಾಗಿದೆ. ಬಾಳೆಹೊನ್ನೂರು ವ್ಯಾಪ್ತಿಯಲ್ಲಿ ಶಾಲೆ ಬಿಟ್ಟ 22 ಮಕ್ಕಳನ್ನು ಗುರುತಿಸಲಾಗಿದೆ. ಈ ಮಕ್ಕಳನ್ನು ನೋಡಿಕೊಳ್ಳಲು ಸ್ವಯಂ ಸೇವಕಿಯರನ್ನು ನೇಮಕ ಮಾಡಿಕೊಳ್ಳಲಾಗಿದೆ. ಇದೊರಂದಿಗೆ ವಿವಿಧ ವಿಷಯದಲ್ಲಿ ಪರಿಣಿತಿ ಹೊಂದಿದ ಶಿಕ್ಷಕರು ಮಕ್ಕಳಿಗೆ ತರಬೇತಿ ನೀಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯ ಅಧಿಕಾರಿ ಡಿ. ರಾಜಪ್ಪ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗುರುಶಾಂತಪ್ಪ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಮೌನೇಶ್ವರಾಚಾರ್, ಇಸಿಒ ವೆಂಕಟರಾಜು, ಬಿಆರ್ಸಿ ತಿಪ್ಪೇಸ್ವಾಮಿ, ಮುಖ್ಯ ಶಿಕ್ಷಕ ಎಂ.ಸಿ. ವೀರಯ್ಯ, ಶಿಕ್ಷಕ ಉಪೇಂದ್ರ, ಸ್ವಯಂ ಸೇವಕಿ ಮಂಕಮ್ಮ ಮೊದಲಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

