ಅಂಗವಿಕಲರಲ್ಲಿ ಆತ್ಮಸ್ಥೈರ್ಯ ಅಗತ್ಯ: ಮಹೇಶ್
ಚಿಕ್ಕಮಗಳೂರು: ಅಂಗವಿಕಲರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಅವರಲ್ಲಿ ಆತ್ಮಸ್ಥೈರ್ಯವನ್ನು ತುಂಬಬೇಕು ಎಂದು ಜಿಲ್ಲಾ ಸ್ಕೌಟ್ ಆಯುಕ್ತ ಎ.ಎನ್. ಮಹೇಶ್ ಕರೆ ನೀಡಿದ್ದಾರೆ.
ಜಿಲ್ಲಾ ಆಟದ ಮೈದಾನದಲ್ಲಿರುವ ಸ್ಕೌಟ್ ಭವನದಲ್ಲಿ ಭಾರತ ಸರ್ಕಾರದ ಯುವಜನ ಸೇವಾ ಮತ್ತು ಕ್ರೀಡಾ ಮಂತ್ರಾಲಯ, ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಅಡ್ವೆಂಚರ್ ಮತ್ತು ಸ್ಪೋರ್ಟ್ಸ್ ಕ್ಲಬ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶಯದಲ್ಲಿ ಶುಕ್ರವಾರ ನಡೆದ ಸಮುದಾಯ ಶಿಕ್ಷಕರ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿಯೊಂದು ಕ್ಷೇತ್ರದಲ್ಲಿಯೂ ವಿಕಲಚೇತನರು ಪ್ರತಿಭೆಯನ್ನು ಮೆರೆಯುತ್ತಿದ್ದು ಅವರಲ್ಲಿನ ಆತ್ಮಸ್ಥೈರ್ಯ ಮೆಚ್ಚುವಂತಹದ್ದು ಎಂದರು.
ಪ್ರೋತ್ಸಾಹಿಸುವ ಅಗತ್ಯವಿದೆ: ಚಿಕ್ಕಮಗಳೂರಿನ ಅಂಧ ಬಾಲಕ ಶವಾದ್ ಇಂದು ಕ್ರೀಡಾ ಕ್ಷೇತ್ರದಲ್ಲಿ ಪ್ರಪಂಚದ ಹತ್ತನೇ ಸ್ಥಾನದಲ್ಲಿದ್ದು, ಚಿಕ್ಕಮಗಳೂರಿನ ಮಂಜಪೊ ಕರಾತೆಯಲ್ಲಿ ಬ್ಲಾಕ್ ಬೆಲ್ಟ್ ಪಡೆದಿದ್ದು ಸೇರಿದ್ದಂತೆ ನಮ್ಮ ಮುಂದೆ ಉದಾಹರಣೆಯಲ್ಲಿದ್ದು ಶಿಕ್ಷಕರು ಮತ್ತು ಪೋಷಕರು ಸಮಾಜದ ಪ್ರತಿಯೊಬ್ಬ ಪ್ರಜೆಯು ವಿಕಲಚೇತನರಿಗೆ ಪೋತ್ಸಾಹಿಸುವ ಅವಶ್ಯಕತೆ ಇದೆ ಎಂದು ಹೇಳಿದರು.
ಚಿಕ್ಕಮಗಳೂರಿನ ಅಂಧ ಮಕ್ಕಳ ಪಾಠ ಶಾಲೆಯ ಪೋಷಕ ನಸ್ರುಲ್ಲಾ ಷರೀಫ್ ಮಾತನಾಡಿ, ಒಂದು ಒಳ್ಳೆಯ ಉದ್ದೇಶದಿಂದ ಹತ್ತು ಮಕ್ಕಳಿಂದ ಪ್ರಾರಂಭಿಸಿದ ಪಾಠ ಶಾಲೆ ಇಂದು ನೂರಾರು ಮಕ್ಕಳಿಗೆ ಆಶ್ರಯ ನೀಡಿದ್ದು, ವಿವಿಧ ಕ್ಷೇತ್ರಗಳಲ್ಲಿ ವಿಶ್ವಕ್ಕೆ ಹಲವು ಪ್ರತಿಭಾಂತರನ್ನು ಕೊಡುಗೆಯಾಗಿ ನೀಡಿದೆ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಯುವಜನ ಸೇವಾ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪಾಂಡುರಂಗ, ಪ್ರತಿಯೊಬ್ಬ ಪ್ರಜೆಗಳು ಎಲ್ಲರಂತೆ ಬದುಕುವ ಹಕ್ಕಿದ್ದು, ಈ ನಿಟ್ಟಿನಲ್ಲಿ ಜನರ ಸಹಾನೂಭೂತಿಗಿಂತ ಸಹಕಾರದ ಅಗತ್ಯವಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ, ವಿಶೇಷ ಒಲಂಪಿಕ್ಸ್ ಜಿಲ್ಲಾ ಸಮನ್ವಯಾಧಿಕಾರಿ ಎ.ಆರ್. ಪ್ರಕಾಶ್, ಜಿಲ್ಲಾ ಆಡ್ವೆಂಚರ್ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ಕಿಶನ್ ಗೌಡ, ಸಂಪನ್ಮೂಲ ವ್ಯಕ್ತಿ ಲೋಹಿತ್ ಶೆಟ್ಟಿ, ಚೇತನ್ ಉಪಸ್ಥಿತರಿದ್ದರು. ಪ್ರಕಾಶ್ ಸ್ವಾಗತಿಸಿ, ಶಿಕ್ಷಕ ಸುರೇಶ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

