ಚಿಕ್ಕಮಗಳೂರು

ಶೃಂಗೇರಿಯಲ್ಲಿ ಪಿಎಫ್‌ಐ ಪ್ರತಿಭಟನೆ

Published On :

ಶೃಂಗೇರಿ:  ತನಿಕೋಡು ಎನ್‌ಕೌಂಟರ್ ಘಟನೆ ಬಗ್ಗೆ ಸಿಐಡಿ ತನಿಖೆ ಕಣ್ಣೊರೆಸುವ ತಂತ್ರವಾಗಿದ್ದು, ಕೂಡಲೇ ಸರ್ಕಾರ ಸಿಬಿಐ ತನಿಖೆಗೆ ವಹಿಸಬೇಕು ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಮೊಹಮ್ಮದ್ ಫಾರೂಕ್ ಆಗ್ರಹಿಸಿದರು.
ಪಟ್ಟಣದಲ್ಲಿ ತನಿಕೋಡು ಘಟನೆ ಖಂಡಿಸಿ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ಎಎನ್‌ಎಫ್ ಪಡೆ ಕಾನೂನು ಕೈಗೆತ್ತಿಕೊಳ್ಳಲು ಅಧಿಕಾರ ಕೊಟ್ಟವರು ಯಾರು, ರಾಜ್ಯದಲ್ಲಿ ಜಾತ್ಯತೀತದ ಬಗ್ಗೆ ಮಾತನಾಡುವ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಸಿಬಿಐ ತನಿಖೆಗೆ ಆದೇಶ ನೀಡಲು ಹಿಂದೇಟು ಹಾಕುವುದು ಏಕೆ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳದಿದ್ದರೆ,ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸದಿದ್ದರೆ ಸಂಘಟನೆ ರಾಜ್ಯಾದ್ಯಾಂತ ಹೋರಾಟ ನಡೆಸುತ್ತದೆ ಎಂದು ಎಚ್ಚರಿಸಿದರು.
ಎಸ್‌ಡಿಎಫ್‌ಐ ಸಂಘಟನೆಯ ರಿಯಾಜ್, ಜಲೀಲ್ ಕೃಷ್ಣಾಪುರ ಮಾತನಾಡಿದರು. ಎಸ್‌ಡಿಎಫ್‌ನ ಅನ್ವರ್ ಸಾದತ್, ಕೋಮು ಸೌಹಾರ್ದ ವೇದಿಕೆಯ ಗೌಸ್ ಮೊಯಿದಿನ್, ನ್ಯಾಯವಾದಿ ಮಜೀದ್‌ಖಾನ್,ಇಕ್ಬಾಲ್ ನಂದನಬೇಟ್ಟು, ಮೃತ ಕಬೀರ್‌ನ ಸೋದರ ಇಸ್ಮಾಯಿಲ್, ಶೇಖುನ್ನಿ, ತಬಾರಕ್ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು. ನಂತರ ಪಟ್ಟಣದಲ್ಲಿ ಮೆರವಣಿಗೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.