ಚಿಕ್ಕಮಗಳೂರು

ತುಷ್ಟೀಕರಣದ ಪರಮಾವಧಿ: ಜೋಶಿ

Published On :

ಹುಬ್ಬಳ್ಳಿ: ವಿಚಾರಣೆಗೆ ಮೊದಲೇ ನಕ್ಸಲ್ ನಿಗ್ರಹ ಪಡೆಯ ಪೊಲೀಸ್ ಸಿಬ್ಬಂದಿ ಗುಂಡೇಟಿಗೆ ಬಲಿಯಾದ ಕಬೀರ್ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸುವ ಮೂಲಕ ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ತುಷ್ಟೀಕರಣದ ಪರಮಾವಧಿ ತಲುಪಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತನಿಕೋಡು ಬಳಿ ನಡೆದ ಎನ್‌ಕೌಂಟರ್‌ನಲ್ಲಿ ಹತನಾಗಿರುವ ಕಬೀರ್ ವಿರುದ್ಧ ಮೂರು-ನಾಲ್ಕು ಠಾಣೆಗಳಲ್ಲಿ ಪ್ರಾಣಿ ಹಿಂಸೆ, ಗೋ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಆದರೂ ಸರ್ಕಾರ ಅಲ್ಪಸಂಖ್ಯಾತ ಸಮುದಾಯವನ್ನು ಓಲೈಸುವುದಕ್ಕಾಗಿ ಕಬೀರ್ ಕುಟುಂಬಕ್ಕೆ ಪರಿಹಾರ ಘೋಷಿಸಿದೆ. ಅಪರಾಧಿಕ ಹಿನ್ನೆಲೆಯುಳ್ಳ ವ್ಯಕ್ತಿ ಪರವಾಗಿ ನಿಲ್ಲುವ ಮೂಲಕ ಸರ್ಕಾರ ಪೊಲೀಸ್ ಪಡೆಯ ಆತ್ಮಸ್ಥೈರ್ಯ ಕುಂದಿಸಿದೆ. ಗುಲ್ಬರ್ಗದಲ್ಲಿ ನಡೆದ ಮುನ್ನಾ ಎನ್‌ಕೌಂಟರ್ ಪ್ರಕರಣದಲ್ಲೂ ರಾಜ್ಯ ಸರ್ಕಾರ ತುಷ್ಟೀಕರಣ ನೀತಿ ಅನುಸರಿಸಿದೆ. ಮಲ್ಲಿಕಾರ್ಜುನ ಬಂಡೆ ಸಾವಿನಲ್ಲಿ ಐಜಿ ವಜೀರ್ ಅಹ್ಮದ್ ಕೈವಾಡ ಇದೆ ಎಂದು ಸ್ವತಃ ಸಿಎಂ ಸಿದ್ದರಾಮಯ್ಯ ಹೇಳಿದ್ದರೂ ಅವರ ವಿರುದ್ಧ ಕ್ರಮ ತೆಗೆದುಕೊಂಡಿಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.