ಚಿಕ್ಕಮಗಳೂರು

ಕಾಮಗಾರಿ ಪ್ರಗತಿ ಪರಿಶೀಲನೆಗೆ ಶೀಘ್ರ ತಂಡ ರಚನೆ

Published On :

ಸಾಗರ: ಉದ್ಯೋಗಖಾತ್ರಿ ಹಾಗೂ ಜಲಾನಯನ ಕಾಮಗಾರಿಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲು ಹಾಗೂ ಕಾಮಗಾರಿ ಪ್ರಗತಿ ಪರಿಶೀಲ ನೆಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ಒಳಗೊಂಡ ತಂಡ ರಚಿಸಲು ತೀರ್ಮಾನಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.
ಶನಿವಾರ ತಾಪಂ ಆವರಣದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಲಾನಯನ ಇಲಾಖೆ ನಿರ್ವಹಿಸಿರುವ ಕಾಮಗಾರಿ ಕುರಿತು ಸಾರ್ವಜನಿಕ ವಲಯದಿಂದ ದೂರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಪ್ರಮುಖ ಪಾತ್ರ: ದುಡಿಯುವ ಕೈಗಳಿಗೆ ಕೆಲಸ ಕೊಡುವ ಉದ್ಯೋಗಖಾತ್ರಿ ಯೋಜನೆ ಗ್ರಾಮೀಣರಿಗೆ ಆರ್ಥಿಕ ಸ್ವಾವಲಂಬನೆ ಕಲ್ಪಿಸುವಲ್ಲಿ ಪ್ರಮುಖಪಾತ್ರ ವಹಿಸಿದೆ. ಆದರೆ ಯೋಜನೆ ಯಶಸ್ವಿ ಅನುಷ್ಠಾನದ ಬಗ್ಗೆ ರಾಜ್ಯ ಸರ್ಕಾರದಿಂದ ಹಿಡಿದು ಗ್ರಾಪಂ ಹಂತದವರೆಗೂ ಯಾರಿಗೂ ಆಸಕ್ತಿ ಇಲ್ಲವಾಗಿದೆ. ಉದ್ಯೋಗಖಾತ್ರಿ ಯೋಜನೆಯಡಿ ಪ್ರತಿವರ್ಷ ರು. 15 ಸಾವಿರ ಕೋಟಿ ವರೆಗೂ ಬಳಸಿಕೊಳ್ಳಲು ಅವಕಾಶವಿದ್ದು, ಕಳೆದ ವರ್ಷ ಕೇವಲ ಎರಡು ಸಾವಿರ ಕೋಟಿ ಮಾತ್ರ ಬಳಕೆ ಮಾಡಿಕೊಳ್ಳಲಾಗಿದೆ ಎಂದರು. ಹಳ್ಳಿಗಳಲ್ಲಿ ಕೂಲಿ ಜಾಸ್ತಿಯಾದರೆ ತಮ್ಮ ಮನೆಗೆ ಕೆಲಸದಾಳುಗಳು ಬರುವುದಿಲ್ಲ ಎನ್ನುವ ಆತಂಕದಲ್ಲಿ ಕೆಲವರು ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡುವವರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ದೇಶದ ಒಟ್ಟು ಕಾರ್ಮಿಕರ ಸಂಖ್ಯೆಯಲ್ಲಿ ಶೇ.80ರಷ್ಟಿದ್ದು, ಅವರು ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವತ್ತ  ಹೆಚ್ಚಿನ ಗಮನ ಹರಿಸಬೇಕು ಎಂದರು.
ಬಸ್ಸು ನಿಲ್ದಾಣ ತೆರವು: ಪರದಾಟ
ಸೊರಬ: ರಸ್ತೆ ಅಗಲೀಕರಣದ ಹಿನ್ನೆಲೆಯಲ್ಲಿ ಪಟ್ಟಣದ ರಂಗನಾಥ ಗುಡಿಯ ಬಳಿ ಇದ್ದ ಬಸ್ಸು ನಿಲ್ದಾಣ ಕೆಡವಿದ್ದು, ಬಿಸಿಲು, ಮಳೆ ರಕ್ಷಣೆ ಇಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಪಪಂ ವ್ಯಾಪ್ತಿಗೆ ಸೇರುವ ಈ ಬಸ್ಸು ನಿಲ್ದಾಣವನ್ನು ಏಕಾಏಕಿ ಶನಿವಾರ ಮಧ್ಯಾಹ್ನ ಜೆಸಿಬಿ ಮೂಲಕ ತೆರವುಗೊಳಿಸಿದ್ದು, ದಿನದ ಅಧಿಕ ಬಿಸಿಲಿನ ತಾಪ ಮತ್ತು ಸಂಜೆ ಸುರಿದ ಮಳೆಯಿಂದ ಸೂರಿಲ್ಲದೆ ಪ್ರಯಾಣಿಕರು ಪೇಚಾಡುತ್ತಿದ್ದರು.
ಸುತ್ತಲ ನಿವಾಸಿಗಳು ತೆರವುಗೊಳಿಸಿದ್ದಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.  ಕೂಡಲೆ ಈ ಜಾಗ ಸಮತಟ್ಟುಗೊಳಿಸಿ, ತಾತ್ಕಾಲಿಕ ನೆರಳಿನಾಶ್ರಯ ಮಾಡಿ ಪ್ರಯಾಣಿಕರಿಗೆ ನೆರವಾಗಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.