ಜೀವನ ಮೌಲ್ಯ ಬೆಳೆಸಿಕೊಳ್ಳಿ'
ಶೃಂಗೇರಿ: ಪ್ರತಿಯೊಬ್ಬರು ಜೀವನದಲ್ಲಿ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಮಂಡ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾದ್ಯಾಪಕ ಶಿವರಾಮು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಪಟ್ಟಣದ ಜಿಎಸ್ಬಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ, ಶಿಸ್ತು, ಸಂಯಮ, ಪ್ರಾಮಾಣಿಕತೆ ಜೊತೆಗೆ ಸೃಜನಶೀಲತೆ, ಭಾವನಾತ್ಮಕತೆ ಬೆಳೆಸಿಕೊಳ್ಳಬೇಕು. ತಪ್ಪುಗಳು ಸಹಜ, ಅದನ್ನು ತಿದ್ದಿಕೊಳ್ಳುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವೃತ್ತಿಪರ ಶಿಕ್ಷಣದ ಅಗತ್ಯತೆಯಿದೆ. ಸೋಲು ಗೆಲುವು ಸಮಾನವಾಗಿ ಸ್ವೀಕರಿಸಬೇಕು.ವಿದ್ಯಾರ್ಥಿ ಜೀವನದಲ್ಲಿ ಕಳೆದ ಕ್ಷಣಗಳು ಅತ್ಯಮೂಲ್ಯ. ಉತ್ತಮ ಸಾಧನೆ ಮಾಡಿ ಸಮಾಜದಲ್ಲಿ ಒಳ್ಳೆಯ ನಾಗರೀಕರಾಗಿ ಜೀವನ ನಡೆಸಬೇಕು ಎಂದರು. ಕಾಲೇಜಿನ ಪ್ರಾಚಾರ್ಯ ಪ್ರೊ.ಕೆ.ಜಿ.ಸಿದ್ದಲಿಂಗೇ ಗೌಡ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಂಧ್ರ ಬ್ಯಾಂಕಿನ ನಿವೃತ್ತ ವ್ಯವಸ್ಥಾಪಕ ರಾಮಕೃಷ್ಣ ಕೊತ್ತಪಲ್ಲಿಆಶಾಲತಾ,ನಾಗರಾಜ್, ಸುಮಿತ್ರ, ಸಂಹಿತಾ, ರತ್ನ, ಗೌತಮಿ, ಕವಿತ ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕ್ರತಿಕ ಮನರಂಜನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾಲೇಜಿಗೆ ಕಟ್ಟಡ: ಶ್ರೀನಿವಾಸ್ ಭರವಸೆ
ತರೀಕೆರೆ: ಶೀಘ್ರದಲ್ಲೇ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸ್ವಂತ ಕಟ್ಟಡ ಒದಗಿಸಿಕೊಡಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದ್ದಾರೆ. ಅವರು, ಶನಿವಾರ ಕಾಲೇಜು ವತಿಯಿಂದ ಕಾಲೇಜು ಆವರಣದಲ್ಲಿ ಏರ್ಪಾಡಾಗಿದ್ದ ಸಾಂಸ್ಕೃತಿಕ ಕ್ರೀಡಾ, ಎನ್ಎಸ್ಎಸ್,ಯುವ ರೆಡ್ ಕ್ರಾಸ್, ಮಹಿಳಾ ವೇದಿಕೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿವಿಧ ವೇದಿಕೆಗಳ ಸಮಾರೋಪ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಕಾಲೇಜು ಕಟ್ಟಡ ಕಟ್ಟಲು ಸರ್ಕಾರದಿಂದ ಹಣ ಕೂಡ ಮಂಜೂರಾಗಿದೆ, ನಿವೇಶನ ಒದಗಿಸುವಲ್ಲಿ ಇರುವ ಅಡೆತಡೆಗಳನ್ನು ನಿವಾರಿಸಿ ಶೀಘ್ರದಲ್ಲೇ ಕಟ್ಟಡ ನಿರ್ಮಾಣಕ್ಕೆ ಎಲ್ಲ ಪ್ರಯತ್ನ ಮಾಡಲಾಗುವುದು ಎಂದು ಅವರು ತಿಳಿಸಿದರು. ಪುರಸಭೆ ಅಧ್ಯಕ್ಷ ಜಿ.ಆರ್.ಸುನೀಲ್ ದತ್, ನಿವೃತ್ತ ಪ್ರಾಚಾರ್ಯ ಬಿ.ಈ.ಕುಮಾರಪ್ಪ ಮಾತಡಿದರು. ಪುರಸಭೆ ಉಪಾಧ್ಯಕ್ಷೆ ಪುಟ್ಟಮ್ಮ ಅಣ್ಣಯ್ಯ, ಸದಸ್ಯ ಸುರೇಶ್, ಭದ್ರಾವತಿ ಸ.ಪ್ರ.ಕಾಲೇಜು ಎನ್ಎಸ್ಎಸ್ ಅಧಿಕಾರಿ ಡಾ.ಬಿ.ಜಿ. ಅಮೃತೇಶ್, ಡಾ.ಎ.ನಾಗರಾಜಪ್ಪ, ಪಿ.ಜಿ.ಶಿವಮೂರ್ತಿ, ಎಚ್.ಬಿ.ಜಯಕೀರ್ತಿ, ಡಾ.ಎ.ಬಿ.ಜಗದೀಶ್, ಡಾ.ಬಿ.ಎನ್.ಲತಾಕುಮಾರಿ, ಗೀತಾ, ಪಲ್ಲವಿ, ಮಹಾಲಕ್ಷ್ಮಿ ಮತ್ತಿತರರು ಸಮಾರಂಭದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

