ರೈಲಿಗೆ ಸಿಲುಕಿ ವ್ಯಕ್ತಿ ಸಾವು
ಬೀರೂರು: ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆರಳುವ ಜನಶತಾಬ್ದಿ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಪಟ್ಟಣದ ಹೃದಯ ಭಾಗದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಶಿವಶಂಕರ್ ಮೃತಪಟ್ಟವರು. ಪೇಯಿಟಿಂಗ್ ಕೆಲಸ
ಮಾಡುತ್ತಿದ್ದ ಶಿವಶಂಕರ್ ಎಂದಿನಂತೆ ಕೆಲಸ ಮುಗಿಸಿಕೊಂಡು ಸಂಜೆ ಮನೆಗೆ ತೆರಳುವ ಸಂದರ್ಭದಲ್ಲಿ ಜನಶತಾಬ್ದಿ ಎಕ್ಸ್ಪ್ರೆಸ್ ರೈಲು ಆಗಮಿಸುತ್ತಿರುವುದನ್ನು ಗಮನಿಸದೇ ಹಳಿ ದಾಟುವ ಸಂದರ್ಭದಲ್ಲಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಶಿವಶಂಕರ್ ಅವರು ಚಂದ್ರಪ್ಪ ಎಂಬುವವರ ಪುತ್ರರಾಗಿದ್ದು ಅಂಚೇರ ಬೀದಿಯಲ್ಲಿ ವಾಸವಾಗಿದ್ದರು. ಅರಸೀಕೆರೆ ರೇಲ್ವೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಇದೊಂದು ಆಕಸ್ಮಿಕ ಘಟನೆ ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಎಐಟಿ ಕಾಲೇಜಿನ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ
ಚಿಕ್ಕಮಗಳೂರು: ನಗರದ ಎಐಟಿ ಕಾಲೇಜು ತನ್ನ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಏ. 29 ರಂದು ಬೀಳ್ಕೋಡುಗೆ ಸಮಾರಂಭ ಹಮ್ಮಿಕೊಂಡಿದೆ. ಅಂದು ಬೆಳಗ್ಗೆ 11 ಗಂಟೆಗೆ ಕಾಲೇಜಿನ ಎಸ್.ಟಿ.ಎನ್. ರಂಗಮಂದಿರದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ನಿರ್ಮಿಲಾನಂದನಾಥ ಮಹಾಸ್ವಾಮಿ ಹಾಗೂ ಶೃಂಗೇರಿ ಶಾಖಾ ಮಠದ ಗುಣನಾಥ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.
ಡಿಐಎಟಿ ಕುಲಪತಿ ಡಾ. ಪ್ರಹ್ಲಾದ ಹಾಗೂ ಐ.ಐ.ಎಸ್.ಸಿ.ನ ಪ್ರಾಧ್ಯಾಪಕ ಡಾ. ಟಿ.ಜಿ. ಸೀತಾರಾಮ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಕಾಲೇಜು ಪ್ರಾಂಶುಪಾಲ ಡಾ. ಸಿ.ಕೆ. ಸುಬ್ರಾಯ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

