ಚಿಕ್ಕಮಗಳೂರು

ವಿದ್ಯಾಲಯ ಆರಂಭಕ್ಕೆ ಬಿಜೆಪಿ ಮನವಿ

Published On :

ಚಿಕ್ಕಮಗಳೂರು: ಕುದುರೆಮುಖದಲ್ಲಿರುವ ಕೇಂದ್ರೀಯ ವಿದ್ಯಾಲಯವನ್ನು ಪುನಾರಂಭ ಮಾಡುವಂತೆ ಬಿಜೆಪಿ ಜಿಲ್ಲಾ ಶೈಕ್ಷಣಿಕ ಪ್ರಕೋಷ್ಟ ಘಟಕ ಜಿಲ್ಲಾಡಳಿತವನ್ನು ಆಗ್ರಹಿಸಿದೆ.
ಈ ಸಂಬಂಧ ಜಿಲ್ಲಾಧಿಕಾರಿ ಶೇಖರಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಘಟಕದ ಜಿಲ್ಲಾ ಸಂಚಾಲಕ ದೀಪಕ್ ದೊಡ್ಡಯ್ಯ, ಈ ಶಾಲೆಯಲ್ಲಿ 172 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿನ ಶಿಕ್ಷಕರನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದರು.
ಉಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಪರವಾಗಿ ಜಿಲ್ಲಾಧಿಕಾರಿಗಳು ಕೂಡಲೇ  ಮಧ್ಯಪ್ರವೇಶಿಸಿ ನಿಗದಿತ ವೇಳಾಪಟ್ಟಿಯಂತೆ ಪಠ್ಯಕ್ರಮ ನಡೆಸಲು ಅವಶ್ಯವಿರುವ ಬೋಧನಾ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳುವ ಮೂಲಕ ಶಾಲೆಯ ಶೈಕ್ಷಣಿಕ ಚಟುವಟಿಕೆ ಆರಂಭಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದಾರಿ ದೀಪವಾಗಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷೆ ಪದ್ಮಾ ಚಂದ್ರಪ್ಪ, ನಗರಸಭೆ ಅಧ್ಯಕ್ಷ ಕೆ.ಎಸ್. ಪುಷ್ಪರಾಜ್, ಮಾಜಿ ಅಧ್ಯಕ್ಷ  ಪ್ರೇಂಕುಮಾರ್, ಎಚ್.ಡಿ. ತಮ್ಮಯ್ಯ, ಬಿಜೆಪಿ ನಗರಾಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.