ವೆಂಕಟೇಶ್ವರ ದೇಗುಲ ವಾರ್ಷಿಕೋತ್ಸವ ಮೇ 2ಕ್ಕೆ
ಕಡೂರು: ಪಟ್ಟಣದ ವೆಂಕಟೇಶ್ವರ ದೇವಸ್ಥಾನದಲ್ಲಿ ಮೇ 2ರಂದು ವೆಂಕಟೇಶ್ವರಸ್ವಾಮಿ ಅವರ 20ನೇ ವರ್ಷದ ವಾರ್ಷಿಕೋತ್ಸವ ಹಾಗೂ ದಂಪತಿ ಸಹಿತ ನವಗ್ರಹ ದೇವಸ್ಥಾನದ 2ನೇ ವರ್ಷದ ಕಾರ್ಯಕ್ರಮಗಳು ನಡೆಯಲಿದೆ.
ದೇವಾಲಯದಲ್ಲಿ ಬೆಳಗ್ಗೆ 7 ಗಂಟೆಗೆ ದೇವತಾ ಪ್ರಾರ್ಥನೆ, ಸ್ವಸ್ತಿವಾಚನ, ಪುಣ್ಯಾಹ, 8 ಗಂಟೆಗೆ ಪಂಚಾಮೃತ ಅಭಿಷೇಕ, 9.30 ಗಂಟೆಗೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. 10.30 ಗಂಟೆಗೆ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಮಹಾ ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, 1.30 ಗಂಟೆಗೆ ಸಾರ್ವತ್ರಿಕ ಪ್ರಸಾದ ವಿನಿಯೋಗ ನಡೆಯಲಿದೆ. ಸಂಜೆ 6 ಗಂಟೆಗೆ ಸಾಮೂಹಿಕ ವಿಷ್ಣು ಸಹಸ್ರನಾಮ ಪಾರಾಯಣ ಮತ್ತು ತುಳಸಿ ಸಹಸ್ರ ನಾಮಾರ್ಚನೆ, ಪೂರ್ಣ ಫಲಪ್ರಸಾದ ವಿನಿಯೋಗ ನಡೆಯಲಿದೆ. ಪಾರಾಯಣದಲ್ಲಿ ಭಾಗವಹಿಸುವವರು ಸಂಜೆ 5.30 ಗಂಟೆಗೆ ದೇವಾಲಯಕ್ಕೆ ಬರಬೇಕು ಎಂದು ಸಮಿತಿ ತಿಳಿಸಿದೆ.
ರಾತ್ರಿ 7 ಗಂಟೆಗೆ ಶ್ರೀಲಕ್ಷ್ಮಿ ದೇವರಿಗೆ ಕುಂಕುಮ ಸಹಸ್ರ ನಾಮಾರ್ಚನೆ, ರಾತ್ರಿ 9 ಗಂಟೆಗೆ ಮಹಾ ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. ದಂಪತಿ ನವಗ್ರಹ ದೇವಾಲಯದ 2ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಬೆಳಗ್ಗೆ 7.30 ಗಂಟೆಗೆ ಕ್ಷೀರಾಭಿಷೇಕ ನಡೆಯಲಿದೆ.
ಬೆಳಗ್ಗೆ 9.30 ಗಂಟೆಗೆ ಮಹಾ ಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ದೇವಾಲಯದ ಅಧ್ಯಕ್ಷ ಡಿ. ಕೃಷ್ಣಮೂರ್ತಿ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

