ಹರಟೆ ಕಾರ್ಯಕ್ರಮ ಇಂದು
ಚಿಕ್ಕಮಗಳೂರು: ಜಿಲ್ಲಾ ಪತ್ರಕರ್ತರ ಸಂಘದ ಆಶ್ರಯದಲ್ಲಿ ಭಾನುವಾರ ಸಂಜೆ 5 ಗಂಟೆಗೆ ನಗರದ ಕುವೆಂಪು ಕಲಾಮಂದಿರದಲ್ಲಿ ಹರಟೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್, ಡಾ.ರವೀಂದ್ರನಾಥ್, ನಟೇಶ್ ಭಾಗವಹಿಸಲಿದ್ದು, ವಿಶ್ವಕರ್ಮ ಆಚಾರ್ಯ ಅವರು ಚಿತ್ರ ರಚಿಸಲಿದ್ದಾರೆ. ಇದಕ್ಕೂ ಮುನ್ನಾ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಸನ್ಮಾನವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಎಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಸಿ.ಕೆ. ಸುಬ್ರಾಯ ಉದ್ಘಾಟಿಸಲಿದ್ದಾರೆ. ಸಂಘದ ಜಿಲ್ಲಾಧ್ಯಕ್ಷ ಜಿ.ಎಂ. ರಾಜಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ. ನಗರಸಭಾ ಅಧ್ಯಕ್ಷ ಪುಷ್ಪರಾಜ್, ಹಿರೇಮಗಳೂರು ಕಣ್ಣನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಜಿ.ವಿ. ಚೂಡನಾಥ ಅಯ್ಯರ್, ಗೌರಮ್ಮ ಬಸವೇಗೌಡ, ಡಾ. ಪಿ. ಸುಧೀಶ್ ಕುಮಾರ್ ಹಾಗೂ ಕಿಶೋರ್ ಕುಮಾರ್ ಹೆಗ್ಡೆ ಅವರನ್ನು ಗೌರವಿಸಲಾಗುವುದು.
ಮಾಸಾಶನ ಹೆಚ್ಚಿಸಲು ಮನವಿ
ಚಿಕ್ಕಮಗಳೂರು: ಅಂಗವಿಕಲರಿಗೆ ನೀಡುತ್ತಿರುವ ಮಾಸಾಶನವನ್ನು ರು. 3,000 ಕ್ಕೆ ಹೆಚ್ಚಿಸುವಂತೆ ಕೆಪಿಸಿಸಿ ಕಿಸಾನ್ ಸೆಲ್ ಉಪಾಧ್ಯಕ್ಷ ಸಚಿನ್ ಮೀಗಾ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕೊಪ್ಪ ತಾಲೂಕಿನ ಕಮ್ಮರಡಿಯ ಜೆ.ಪಿ. ನಗರದ ಅಂಗವಿಕಲೆ ಶಶಿಕಲಾ ಅವರಿಗೆ ಇತ್ತೀಚೆಗೆ ಸೈಕಲ್ ವಿತರಿಸಿ ಮಾತನಾಡಿದ ಅವರು, ಈಗ ನೀಡುತ್ತಿರುವ 500 ಮಾಶಾಸನದಿಂದ ಜೀವನ ನಡೆಸುವುದು ಕಷ್ಟ. ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೆ ಏರಿದ್ದರಿಂದ ಜೀವನ ಕಷ್ಟ ಸಾಧ್ಯವಾಗಿದೆ. ಆದ್ದರಿಂದ ಮಾಸಾಶನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು. 2009 ರಲ್ಲಿ ಅಂದಿನ ಕೇಂದ್ರದ ಸಮಾಜ ಕಲ್ಯಾಣ ಸಚಿವೆ ಮೀರಾ ಕುಮಾರ್ ಅವರ ಸಹಕಾರದೊಂದಿಗೆ ಜಿಲ್ಲೆಯ 4,880 ಅಂಗವಿಕಲರಿಗೆ ಅಗತ್ಯ ಸಲಕರಣೆ ಹಾಗೂ ಮಾಸಾಶನ ನೀಡಲಾಗಿತ್ತು ಎಂದರು. ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಈ. ಶೋಭಿಂತ್, ತಾಲೂಕು ಜೆಡಿಎಸ್ ಅಧ್ಯಕ್ಷ ಕೆ.ಕೆ. ಸಾಯಿನಾಥ್, ಕಾಂಗ್ರೆಸ್ ಹಿಂದುಳಿದ ವಿಭಾಗದ ಅಧ್ಯಕ್ಷ ಮಹಾಬಲ, ಅಂಗನವಾಡಿ ಕಾರ್ಯಕರ್ತೆ ಶಾಲಿನಿ, ಮುಖಂಡ ಈಶ್ವರ ನಾಯಕ್, ಸುರೇಶ್ ನಾಯಕ್, ವಾಸಪ್ಪಗೌಡ, ಪ್ರಭಾಕರ ಶೆಟ್ಟಿ ಹಾಗೂ ಸಮರ್ಥ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

