ಚಿಕ್ಕಮಗಳೂರು

ಉಪ್ಪಿನಕುದ್ರು ಮತಗಟ್ಟೆಯಲ್ಲಿ ಮರು ಮತದಾನ

Published On :

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಒಂದು ಮತಗಟ್ಟೆಯಲ್ಲಿ ಏ. 29ರಂದು ಮರು ಮತದಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ತಿಳಿಸಿದ್ದಾರೆ. ರಾಜಕೀಯ ಪಕ್ಷಗಳು, ಸ್ಪರ್ಧಿಸಿದ ಅಭ್ಯರ್ಥಿಗಳು ಹಾಗೂ ಸಾರ್ವಜನಿಕರು ಶಾಂತಿಯುತ ಮರು ಮತದಾನಕ್ಕೆ ಸಹಕರಿಸುವಂತೆ ಅವರು ಕೋರಿದ್ದಾರೆ. ಬೈಂದೂರು ವಿಧಾನಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ-174 ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಉಪ್ಪಿನ ಕುದ್ರು (ಪಶ್ಚಿಮ ಭಾಗ) ಮತಗಟ್ಟೆಯಲ್ಲಿ ಮರು ಮತದಾನಕ್ಕೆ ಭಾರತ ಚುನಾವಣಾ ಆಯೋಗ ಆದೇಶ ನೀಡಿದ್ದು, ಅದರಂತೆ 29ರಂದು ಬೆಳಗ್ಗೆ 7ಗಂಟೆಯಿಂದ ಸಂಜೆ 6 ಗಂಟೆವರೆಗೆ ಮರು ಮತದಾನ ನಡೆಯಲಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಆದೇಶದಲ್ಲಿ ತಿಳಿಸಿದ್ದಾರೆ.


ಬೇಸಿಗೆ ಶಿಬಿರ ಮೇ 5 ರಿಂದ
ಚಿಕ್ಕಮಗಳೂರು:  ತರೀಕೆರೆ ತಾಲೂಕು ಬಾಲ ಭವನ ಸಮಿತಿ ವತಿಯಿಂದ 10 ದಿನಗಳ ಬೇಸಿಗೆ ಶಿಬಿರವನ್ನು ಮೇ 5 ರಿಂದ 15 ರವರೆಗೆ ತರೀಕೆರೆ ಬಿಆರ್‌ಸಿ ಕಟ್ಟಡದಲ್ಲಿ ಹಮ್ಮಿಕೊಳ್ಳಲಾಗಿದೆ. 5 ರಿಂದ 16 ವರ್ಷದೊಳಗಿನ 50 ಮಕ್ಕಳು ಶಿಬಿರದಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಆಸಕ್ತ ಮಕ್ಕಳು ಕಚೇರಿ ಸಮಯದಲ್ಲಿ ತಮ್ಮ ಹೆಸರುಗಳನ್ನು ಏ.25 ರಿಂದ ಮೇ 3 ರೊಳಗಾಗಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ಶ್ರೀರಾಮ ಬಡಾವಣೆ,  ತರೀಕೆರೆ ದೂರವಾಣಿ ಸಂಖ್ಯೆ 08261-222740 ಇಲ್ಲಿಗೆ ಸಂಪರ್ಕಿಸಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.