ಚಿಕ್ಕಮಗಳೂರು

ಸೂಕ್ತ ತನಿಖೆಯಾಗಲಿ

Published On :

ಚಿಕ್ಕಮಗಳೂರು: ತನಿಕೋಡು ಶೂಟೌಟ್ ಪ್ರಕರಣದ ಬಗ್ಗೆ ನ್ಯಾಯಯುತ ತನಿಖೆ ನಡೆಸಬೇಕು ಹಾಗೂ ಪೊಲೀಸರಲ್ಲಿ ನೈತಿಕ ಆತ್ಮಸ್ಥೈರ್ಯ ತುಂಬುವಂತೆ ಆಗ್ರಹಿಸಿ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳು ನಗರದಲ್ಲಿ ಸೋಮವಾರ ಮೌನ ಪ್ರತಿಭಟನೆ ನಡೆಸಿದರು.
ಇಲ್ಲಿನ ಹಳೇ ತಾಲೂಕು ಕಚೇರಿಯಿಂದ ಮೆರವಣಿಗೆಯಲ್ಲಿ ಹೊರಟ ನಿವೃತ್ತ ಪೊಲೀಸ್ ಅಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾ ರಕ್ಷಣಾಧಿಕಾರಿ ಚೇತನ್ ಅವರಿಗೆ ಮನವಿ ಸಲ್ಲಿಸಿದ ಬಳಿಕ ಅಪರ ಜಿಲ್ಲಾಧಿಕಾರಿ ಅರ್ಚನಾ ಅವರಿಗೆ ಮನವಿ ಸಲ್ಲಿಸಿದರು.
ತನಿಕೋಡು ಚೆಕ್‌ಪೋಸ್ಟ್ ಬಳಿ ನಡೆದ ಶೂಟೌಟ್ ಪ್ರಕರಣದ ಬಗ್ಗೆ ಹಲವು ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ಇವುಗಳಿಗೆ ಮಣಿದು ಪೊಲೀಸರ ವಿರುದ್ಧ ಕ್ರಮ ಕೈಗೊಂಡರೆ ನ್ಯಾಯಯುತ ತನಿಖೆಗೆ ಹಿನ್ನಡೆಯಾಗಲಿದೆ. ಸತ್ಯಾಸತ್ಯತೆಯನ್ನು ಮರೆ ಮಾಚುವುದರಿಂದ ಪೊಲೀಸರಲ್ಲಿ ಆತ್ಮಸ್ಥೈರ್ಯ ಕುಗ್ಗಿ, ಸಾರ್ವಜನಿಕರ ಶಾಂತಿ ಹಾಗೂ ನೆಮ್ಮದಿಗೆ ಭಂಗ ಉಂಟಾಗುವ ಸಂಭವ ಇದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಆದುದರಿಂದ ನ್ಯಾಯಯುತವಾಗಿ ತನಿಖೆ ನಡೆಸಬೇಕು ಹಾಗೂ ಪೊಲೀಸರಿಗೆ ಆತ್ಮಸ್ಥೈರ್ಯ ತುಂಬಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಎಸ್. ಚಂದ್ರಾನಾಯ್ಕ, ಕಾರ್ಯಾಧ್ಯಕ್ಷ ಎಚ್.ಎಂ. ಜವರಯ್ಯ, ಅಧ್ಯಕ್ಷ ಎಚ್.ಎನ್. ಪಂಚಾಕ್ಷರಪ್ಪ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.