ಚಿಕ್ಕಮಗಳೂರು

ಬಾಬಾ ರಾಮ್‌ದೇವ್ ಹೇಳಿಕೆಗೆ ಖಂಡನೆ

Published On :

ಚಿಕ್ಕಮಗಳೂರು: ಯೋಗ ಗುರು ಬಾಬಾರಾಮ್‌ದೇವ್ ದಲಿತರ ಬಗ್ಗೆ ಅವಹೇಳನಕಾರಿಯಾಗಿ ನೀಡಿರುವ ಹೇಳಿಕೆ ಖಂಡಿಸಿ ಜಿಲ್ಲಾ ಛಲವಾದಿ ಮಹಾಸಭಾ ಜಿಲ್ಲಾಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಿತು.
ಸಂಘದ ಜಿಲ್ಲಾಧ್ಯಕ್ಷ ಆರ್. ಚಂದ್ರು ನೇತೃತ್ವದಲ್ಲಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಸಹಾಯಕರಾದ ರುದ್ರಪ್ಪ ಜಿ. ರಾವ್ ಅವರಿಗೆ ಮನವಿ ಸಲ್ಲಿಸಿದರು.
ಘನತೆಗೆ ತಕ್ಕುದಲ್ಲ: ದಲಿತರ ಮನೆಗಳಿಗೆ ಉನ್ನತ ವ್ಯಕ್ತಿಗಳು ತೆರಳಿದರೆ ಅಂತಹವರ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡುವ ಮೂಲಕ ದಲಿತರನ್ನು ಅವಹೇಳನ ಮಾಡಿದ್ದಾರೆ. ಇಂತಹ ಹೇಳಿಕೆ ನೀಡಿರುವುದು ರಾಮ್‌ದೇವ್ ಘನತೆಗೆ ಗೌರವ ತರುವಂತದ್ದಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಮನವಿ ಸಲ್ಲಿಸಿದ ಸಂದರ್ಭದಲ್ಲಿ ಸಂಘದ ಕಾರ್ಯಾಧ್ಯಕ್ಷ ಯು.ಡಿ. ರಾಜಣ್ಣ, ಕಾರ್ಯದರ್ಶಿ ನಟರಾಜ್, ರಾಮು ಹಾಜರಿದ್ದರು.
ಖಂಡನೆ: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ಹಗುರವಾಗಿ ಮಾತನಾಡಿರುವ ಬಾಬಾ ರಾಮ್‌ದೇವ್ ಅವರನ್ನು ಬಂಧಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಜೆ.ಕೆ. ಸೋಮಶೇಖರ್ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.