ಚಿಕ್ಕಮಗಳೂರು

5 ಸಾವಿರ ಲಂಚ: ಮೆಸ್ಕಾಂ ಅಭಿಯಂತರಗೆ 3 ವರ್ಷ ಜೈಲು

Published On :

ಚಿಕ್ಕಮಗಳೂರು:  ಕಾಂಪ್ಲೆಕ್ಸ್ ಕಟ್ಟಡಕ್ಕೆ ವಿದ್ಯುತ್ ಸೌಲಭ್ಯ ಕಲ್ಪಿಸಲು ಲಂಚ ಪಡೆದ ಮೆಸ್ಕಾಂನ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 3 ವರ್ಷ ಜೈಲು ಶಿಕ್ಷೆ ಹಾಗೂ 20000 ದಂಡ ವಿಧಿಸಿ ತೀರ್ಪು ನೀಡಿದೆ.
ಪುಟ್ಟಸ್ವಾಮಿಗೌಡ ಎಂಬುವರು ತಮಗೆ ಸೇರಿದ ಮೂಡಿಗೆರೆ ಪಟ್ಟಣದ ಕಾಂಪ್ಲೆಕ್ಸ್ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಪೂರೈಕೆಗಾಗಿ ಮೂಡಿಗೆರೆ ಮೆಸ್ಕಾಂ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಸದರಿ ಕಟ್ಟಡಕ್ಕೆ ವಿದ್ಯುತ್ ಸೌಲಭ್ಯ ಪೂರೈಸಲು ಮೆಸ್ಕಾಂನ ಸಹಾಯಕ ಕಾರ್ಯಪಾಲಕ ಅಭಿಯಂತರ ಬಸಪ್ಪರೆಡ್ಡಿ 5000 ಲಂಚ ಕೇಳಿದ್ದು ಮೊದಲ ಕಂತಿನಲ್ಲಿ 3000 ಪಡೆದಿದ್ದರು. ಆದರೆ, ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸದೇ, ಪುನಃ 2000 ಲಂಚದ ಹಣ ಕೇಳಿ 2010ರ ಡಿ.3 ರಂದು ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು.
ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಎಚ್.ಎಸ್. ಕಮಲ ಅವರು ಪ್ರಕರಣ ಸಾಬೀತಾದ ಹಿನ್ನೆಲೆ ಬಸಪ್ಪರೆಡ್ಡಿ ಅವರಿಗೆ 3 ವರ್ಷ ಕಠಿಣ ಸಜೆ ಹಾಗೂ 20000 ದಂಡವನ್ನು ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಡಿ.ಬಿ. ಸುಜೇಂದ್ರ ಮೊಕದ್ದಮೆ ನಡೆಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.