ಚಿಕ್ಕಮಗಳೂರು

'ಹಿರಿಯರ ತ್ಯಾಗ, ಪ್ರೋತ್ಸಾಹ ವಿದ್ಯಾರ್ಥಿ ಮರೆಯದಿರಲಿ'

Published On :

ಮೂಡಿಗೆರೆ: ವಿದ್ಯಾರ್ಥಿಗಳು ಪೋಷಕರು, ಗುರುಗಳ ತ್ಯಾಗ, ಪ್ರೋತ್ಸಾಹವನ್ನು ಗೌರವಿಸಿ, ಸ್ಮರಿಸಸಬೇಕು. ಆದರೆ, ಇಂದು ವಿದ್ಯಾರ್ಥಿಗಳು ಈ ಮನೋಭಾವದಿಂದ ದೂರವಾಗುತ್ತಿರುವುದು ಬೇಸರದ ಸಂಗತಿ ಎಂದು ಸಾಹಿತಿ ಹಳೆಕೋಟೆ ರಮೇಶ್ ವಿಷಾದ ವ್ಯಕ್ತಪಡಿಸಿದರು.
ಪಟ್ಟಣದ ಡಿಎಸ್‌ಬಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆದ ಸಾಂಸ್ಕೃತಿಕ ಕ್ರೀಡಾ ಮತ್ತು ಎನ್‌ಎಸ್‌ಎಸ್ ಫಟಕಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು. ಪ್ರತಿಯೊಬ್ಬರಲ್ಲೂ ವಿನಯತೆ, ಪ್ರಾಮಾಣಿಕತೆ, ಹೃದಯಶೀಲತೆ ಮನೋಭಾವನೆ ರೂಢಿಸಿಕೊಂಡರೆ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಹೊರಹೊಮ್ಮಲು ಸಾಧ್ಯ ಎಂದರು.
ಸಮಾಜ ನಮಗೇನು ಕೊಟ್ಟಿದೆ ಎನ್ನುವುದಕ್ಕಿಂತ ನಾವು ಸಮಾಜಕ್ಕೇನು ಕೊಡುಗೆ ನೀಡಿದ್ದೇವೆ ಎಂಬುದನ್ನು ಪ್ರತಿಯೊಬ್ಬರೂ ಆತ್ಮಾವಲೋಕನ ಮಾಡಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ದೇಶದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಯುವಕರು ಭ್ರಷ್ಟಾಚಾರದ ವಿರುದ್ಧ ದ್ವನಿಯೆತ್ತಬೇಕು. ಕನ್ನಡ ನಾಡಿನಲ್ಲಿ ವಿದ್ಯಾಭ್ಯಾಸ ಮಾಡಿ ಉನ್ನತ ಹುದ್ದೆಗೆ ಹೊರಹೋದರೂ ಕನ್ನಡ ಭಾಷೆಯನ್ನು ಎಂದಿಗೂ ಮರೆಯಬೇಡಿ ಎಂದು ಮನವಿ ಮಾಡಿದರು.
ಸಾಂಸ್ಕೃತಿಕ ಮತ್ತು ಕ್ರೀಡೆಯಲ್ಲಿ ಭಾಗವಹಿಸಿ ಗೆದ್ದಂತಹ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.  ಸಮಾರೋಪದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಪ್ರೊ. ಎಸ್.ಎಂ. ನಟೇಶ್ ವಹಿಸಿದ್ದರು. ಕಾಫಿ ಬೆಳೆಗಾರ ಡಿ.ಬಿ. ಅಶೋಕ್, ಎನ್‌ಎಸ್‌ಎಸ್ ಸಾಂಸ್ಕೃತಿಕ ವೇದಿಕೆ ಸಂಚಾಲಕ ಪ್ರೊ. ಬಿ.ಸಿ. ಬಸವರಾಜ್, ದೈಹಿಕ ಶಿಕ್ಷಕ ಸಂಚಾಲಕ ಪ್ರೊ. ವೈ.ಪಿ. ಶಶಿಧರ್, ಸಿಡಿಸಿ ಸದಸ್ಯ ರೇವಣ್ಣಗೌಡ, ಪ್ರೊ. ಲಕ್ಷ್ಮೀಕಾಂತ್, ರವೀಂದ್ರರಾಜನ್ ಉಪಸ್ಥಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.