'ಜೀವ ಉಳಿಸಲು ರಕ್ತದಾನ ಅವಶ್ಯ'
ಚಿಕ್ಕಮಗಳೂರು: ರಕ್ತದಾನ ಮಾಡುವುದರಿಂದ ಅಪಘಾತ ಹಾಗೂ ಮತ್ತಿತರೆ ತೊಂದರೆಗಳಿಂದಾಗಿ ಸಂಕಷ್ಟದಲ್ಲಿ ಇರುವವರ ಜೀವ ಉಳಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಹೇಳಿದ್ದಾರೆ.
ಇಲ್ಲಿನ ಕದ್ರಿಮಿದ್ರಿಯ ಕುವೆಂಪು ವಿದ್ಯಾನಿಕೇತನ ಶಾಲೆಯಲ್ಲಿ ಕುವೆಂಪು ಕಲ್ಚರಲ್ ಅಂಡ್ ಎಜುಕೇಷನ್ ಟ್ರಸ್ಟ್ ಮತ್ತು ಭಾರತೀಯ ರೆಡ್ಕ್ರಾಸ್ ಸಂಸ್ಥೆ ಆಶ್ರಯದಲ್ಲಿ ಶನಿವಾರ ನಡೆದ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ರಕ್ತದಾನಿಗಳ ಕೊರತೆ ಇದ್ದು, ವ್ಯಕ್ತಿಯ ಜೀವ ಉಳಿಸುವ ಕಾರ್ಯ ಇದಾಗಿರುವುದರಿಂದ ಹೆಚ್ಚಿನ ಜಾಗೃತಿ ಮೂಡಿಸಬೇಕಾಗಿದೆ. ಒಮ್ಮೆ ರಕ್ತದಾನ ಮಾಡಿದರೆ ಮೂರು ತಿಂಗಳೊಳಗೆ ಪುನಃ ದೇಹದಲ್ಲಿ ರಕ್ತ ಸಂಗ್ರಹವಾಗುತ್ತದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಅವಶ್ಯವಿರುವ ರಕ್ತವನ್ನು ಕೊಡುವಂತ ಕೆಲಸ ಸಾರ್ವಜನಿಕರು ಮಾಡಬೇಕೆಂದು ಸಲಹೆ ನೀಡಿದ ಅವರು, ಕುವೆಂಪು ವಿದ್ಯಾನಿಕೇತನ ಶಾಲೆಯಲ್ಲಿ ರಕ್ತದಾನ ಶಿಬಿರ ಮತ್ತು ಜನರಲ್ಲಿ ಜಾಗೃತಿ ಮೂಡಿಸುವಂತ ಕೆಲಸ ಕೈಗೆತ್ತಿಕೊಂಡಿರುವುದು ಶ್ಲಾಘನಾರ್ಹ ಎಂದು ತಿಳಿಸಿದರು.
ಗ್ರಾಮೀಣ ಭಾಗದ ಜನರಲ್ಲಿ ಮಾಹಿತಿಯ ಕೊರತೆ ಹಾಗೂ ಅಪನಂಬಿಕೆಯಿಂದ ರಕ್ತ ನೀಡಲು ಹಿಂಜರಿಕೆ ಇದ್ದು, ರೆಡ್ ಕ್ರಾಸ್ ಸಂಸ್ಥೆ ಈ ಬಗ್ಗೆ ಹೆಚ್ಚಿನ ಗಮನಹರಿಸಿ ಜಾಗೃತಿ ಮೂಡಿಸುವಂತ ಕೆಲಸವನ್ನು ಮಾಡಬೇಕು ಎಂದು ಸಲಹೆ ನೀಡಿದರು.
ಬಿಷಪ್ ಡಾ.ಅಂಥೋಣಿ ಸ್ವಾಮಿ ಮಾತನಾಡಿ, ಎಲ್ಲಾ ಧರ್ಮದವರು ದೇವರ ಮಕ್ಕಳು. ಎಲ್ಲರೂ ಶಾಂತಿ ಹಾಗೂ ಆರೋಗ್ಯದಿಂದ ಸಮಾಜದಲ್ಲಿ ಬಾಳುವ ನಿಟ್ಟಿನಲ್ಲಿ ಹೆಜ್ಜೆ ಇಡಬೇಕು. ರಕ್ತದಾನ ಮಹತ್ವ ಅರಿತು ತಾವೂ ರಕ್ತದಾನದ ಸೇವೆ ಅಳವಡಿಸಿಕೊಂಡಿರುವುದಾಗಿ ಹೇಳಿದರು. ಮದರಸ ಅರಬಿಯಾ ತಾಲಿಮುಲ್ ಖುರಾನ್ ಸಂಸ್ಥೆಯ ಪ್ರಾಂಶುಪಾಲ ಖ್ವಾಜಾ ಮೊಹಿಯುದ್ದೀನ್ ಮಾತನಾಡಿ, ಹಿಂದೂ, ಮುಸ್ಲಿಂ, ಕ್ರೈಸ್ತರು ಎಲ್ಲರೂ ಅಣ್ಣ ತಮ್ಮಂದಿರ ಹಾಗೆ ಸಮಾಜದಲ್ಲಿ ಜೀವನ ನಡೆಸಬೇಕು. ಎಲ್ಲರ ದೇಹದಲ್ಲೂ ಹರಿಯುತ್ತಿರುವುದು ಒಂದೇ ರಕ್ತ. ನಾವೆಲ್ಲರೂ ಕೂಡಿ ಬಾಳಿದಾಗ ಶಾಂತಿ ನೆಲೆಸುತ್ತದೆ ಎಂದು ಹೇಳಿದರು.
ಉದ್ಯಮಿ ಗೌರಿಶಂಕರ್ ಮಾತನಾಡಿದರು. ರಾಜ್ಯಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದ ಶಾಲೆಯ ನಿತ್ಯ, ವೈಭವ್ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಜಿದ್ವಿಲಾಸ್ ಅವರನ್ನು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಸನ್ಮಾನಿಸಿದರು.
ಶಾಲೆಯ ಪ್ರಾಂಶುಪಾಲ ವಿ.ಎಸ್. ರಾಘವೇಂದ್ರ, ಡಾ.ಸುಂದ್ರೇಗೌಡ, ಕುವೆಂಪು ವಿದ್ಯಾನಿಕೇತನ ಶಾಲೆಯ ಕಾರ್ಯದರ್ಶಿ ಕೆ.ಸಿ.ಶಂಕರ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂಗೀತ ಶಿಕ್ಷಕಿ ಸುಮಾರಾಣಿ ನಿರೂಪಿಸಿ, ಶಿಕ್ಷಕ ಅಬ್ಧುಲ್ ಸತ್ತಾರ್ ಸ್ವಾಗತಿಸಿ, ಮಂಜೇಗೌಡ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

