ಚಿಕ್ಕಮಗಳೂರು

5ರಂದು ಆದಿಸುಬ್ರಹ್ಮಣ್ಯ ಜಾತ್ರೆ

Published On :

ಮೂಡಿಗೆರೆ: ತಾಲೂಕಿನ ಗೋಣಿಬೀಡಿನ ಜಿ. ಅಗ್ರಹಾರದಲ್ಲಿರುವ ಆದಿಸುಬ್ರಹ್ಮಣ್ಯ ಕ್ಷೇತ್ರ ಬಹಳ ಪ್ರಸಿದ್ಧಿಯಾಗಿದ್ದು, ಪುರಾತನ ಪುಣ್ಯ ಕ್ಷೇತ್ರಗಳಲ್ಲೊಂದಾಗಿದೆ. ಶ್ರೀಕ್ಷೇತ್ರದಲ್ಲಿ ಫೆ. 5ರಂದು ಜಾತ್ರೆ ನಡೆಯಲಿದೆ. ಜಾತ್ರೆಗೆ ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸಿ ಹರಕೆ ತೀರಿಸುವುದು ಒಂದು ವಿಶೇಷವಾಗಿದೆ.

ಬಡಮಕ್ಕಳಿಗಾಗಿ ಶಿಕ್ಷಣ ಹಕ್ಕು ಕಾಯ್ದೆ
ಕಡೂರು: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಲೆಂಬ ದೃಷ್ಟಿಯಿಂದ ಯುಪಿಎ ಸರ್ಕಾರವು ಶಿಕ್ಷಣ ಹಕ್ಕು ಕಾಯಿದೆ ಜಾರಿಗೆ ತಂದಿದೆ ಎಂದು ಹಾಸನ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಮಂತರ್‌ಗೌಡ ತಿಳಿಸಿದರು.
ಪಟ್ಟಣದ ಎಂಆರ್‌ಎಂ ಬಯಲು ರಂಗಮಂದಿರದಲ್ಲಿ ಕಡೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದಿಂದ ನಡೆದ ಶಿಕ್ಷಣ ಹಕ್ಕು ಕಾಯಿದೆಯ ಸಹಾಯ ಹಸ್ತ ಮತ್ತು ಕಡೂರು ವಿಧಾನಸಭಾ ಕ್ಷೇತ್ರದ ನೂತನ ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿದರು.
ಜಾರಿಯಾಗಿಲ್ಲ: ಕೇಂದ್ರ ಸರ್ಕಾರವು ಶಿಕ್ಷಣ ಹಕ್ಕು ಕಾಯಿದೆಯನ್ನು ಕಳೆದ 2009ರಲ್ಲಿ ಜಾರಿಗೆ ತಂದಿದ್ದರೂ ಇದು ಬಡವರಿಗೆ ಸರಿಯಾಗಿ ತಲುಪುತ್ತಿರಲಿಲ್ಲ. ಕಳೆದ ಬಾರಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವು ಕೇಂದ್ರದ ಈ ಯೋಜನೆಯನ್ನು ರಾಜ್ಯದಲ್ಲಿ ಸಮರ್ಪಕವಾಗಿ ಜಾರಿಗೆ ತರಲಿಲ್ಲ. ಈ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಘಟಕದಿಂದ ಹಾಸನ ಲೋಕಸಭಾ ಕ್ಷೇತ್ರದ  ಪ್ರತಿ ತಾಲೂಕುಗಳಲ್ಲೂ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಉತ್ತಮ ಶಿಕ್ಷಣ ಉದ್ದೇಶ: ಲೋಕಸಭಾ ಕ್ಷೇತ್ರದ ಯುವ ಘಟಕದ ಉಪಾಧ್ಯಕ್ಷ ರುದ್ರೇಶ್‌ಗೌಡ ಮಾತನಾಡಿ, ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕೆಂಬ ಉದ್ದೇಶದಿಂದ ಶಿಕ್ಷಣ ಹಕ್ಕು ಕಾಯಿದೆಯನ್ನು ಜನರಿಗೆ ತಿಳಿಸಬೇಕು. ಇದರಿಂದ ಶೇ 25ರಷ್ಟು ಮಕ್ಕಳ ಶಾಲಾ ಶುಲ್ಕವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ. ಇದಕ್ಕೆ ನಮ್ಮ ಯುವ ಕಾಂಗ್ರೆಸ್ ಘಟಕಗಳ ಪದಾಧಿಕಾರಿಗಳು ಸಹಾಯ ಮಾಡಲಿದ್ದು, ಅವರ ಸಂಪರ್ಕಕ್ಕಾಗಿ ಮೊ. 9845655262, 9743893677ಗೆ ಕರೆ ಮಾಡಬಹುದು ಎಂದರು.
ತಾಲೂಕು ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಎನ್.ಎಂ. ಮಧುಕುಮಾರ್, ಪ್ರಧಾನ ಕಾರ್ಯದರ್ಶಿ ಕೆ.ಎಲ್. ಧನಂಜಯಕುಮಾರ್, ಪದಾಧಿಕಾರಿಗಳಾದ ಅಜಯ್ ಒಡೆಯರ್, ಜಿ.ಎಂ. ಅಶೋಕ್, ಕಾಂಗ್ರೆಸ್ ಮುಖಂಡರಾದ ಶೆಟ್ಟಿಹಳ್ಳಿ ಮಲ್ಲಿಕಾರ್ಜುನ್, ಬಾಸೂರು ಚಂದ್ರಮೌಳಿ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.