ಚಿಕ್ಕಮಗಳೂರು

17 ರಂದು ಕೃಷಿ ಉತ್ಸವ

Published On :

ಚಿಕ್ಕಮಗಳೂರು: ನಗರದ ಎಪಿಎಂಸಿ ಆವರಣದಲ್ಲಿ ಫೆ. 17 ರಂದು ಕೃಷಿ ಉತ್ಸವ ನಡೆಯಲಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕೃಷಿ ಉತ್ಸವ ನಡೆಯಲಿದೆ ಎಂದು ಎಪಿಎಂಸಿ ಅಧ್ಯಕ್ಷ ನಿಂಗೇಗೌಡ ಸೋಮವಾರ ತಿಳಿಸಿದರು.
 ಪ್ರಗತಿಪರ ಕೃಷಿಕರಾದ ಕರ್ಕಿಪೇಟೆಯ ಕೆ.ಸಿ. ಓಂಕಾರಪ್ಪ ಅವರು ಕೃಷಿ ಉತ್ಸವ ಉದ್ಘಾಟಿಸಲಿದ್ದಾರೆ. ಶಾಸಕ ಸಿ.ಟಿ. ರವಿ, ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿ ನಿರ್ದೇಶಕ ಮನೋಜ್ ಮಿನೆಜೆಸ್, ಜಿಪಂ ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ಜಿಪಂ ಸದಸ್ಯೆ ಭಾಗ್ಯ ರಂಗನಾಥ್, ನಗರಸಭಾ ಸದಸ್ಯರಾದ ಎಚ್.ಡಿ. ತಮ್ಮಯ್ಯ, ನಟರಾಜ್ ಹಾಗೂ ಉತ್ಸವ ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷ ತೇಗೂರು ಜಗದೀಶ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
80ಕ್ಕೂ ಹೆಚ್ಚು ಮಳಿಗೆ: ಉತ್ಸವದ ಅಂಗವಾಗಿ ಎಪಿಎಂಸಿ ಆವರಣದಲ್ಲಿ ಸುಮಾರು 80ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗಿದ್ದು, ಇವುಗಳಲ್ಲಿ ಆಧುನಿಕ ಕೃಷಿ ತಂತ್ರಜ್ಞಾನಗಳ ಸಮಗ್ರ ಪರಿಚಯ ನೀಡಬಲ್ಲ ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಪ್ರಾತ್ಯಕ್ಷಿಕೆಗಳು, ವಿವಿಧ ಇಲಾಖೆಗಳು ಹಾಗೂ ಬ್ಯಾಂಕಿಂಗ್ ಸೌಲಭ್ಯಗಳ ಬಗ್ಗೆ ಮಾಹಿತಿ, ಅಲಂಕಾರಿಕ ಗಿಡಗಳ ಪ್ರದರ್ಶನ, ಮಾರಾಟ, ಸುಧಾರಿತ ಕೃಷಿ ಪದ್ಧತಿಗಳು.
ಲಾಭದಾಯಕ ಹೈನುಗಾರಿಕೆ, ಸಾವಯವ ಕೃಷಿ, ಸರ್ಕಾರಿ ಇಲಾಖೆಗಳ ಸೌಲಭ್ಯಗಳು ಮತ್ತಿತರ ಆಧುನಿಕ ಕೃಷಿ ತಂತ್ರಜ್‌ಞಾನಗಳ ಮೇಲೆ ಬೆಳಕು ಚೆಲ್ಲುವ ಕೃಷಿ ವಿಚಾರಣ ಸಂಕಿರಣಗಳನ್ನು ಏರ್ಪಡಿಸಲಾಗಿದೆ ಎಂದರು.
ಸಮಾರೋಪ: ಅದೇ ದಿನ ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಮೂಡಿಗೆರೆ ಶಾಸಕ ಬಿ.ಬಿ. ನಿಂಗಯ್ಯ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
 ಸುದ್ದಿಗೋಷ್ಠಿಯಲ್ಲಿ ಕೃಷಿ ಉತ್ಸವ ಸಮಿತಿಯ ಪದಾಧಿಕಾರಿಗಳಾದ ತೇಗೂರು ಜಗದೀಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕಿ ಗೀತಾ ಹಾಗೂ ಚಿಕ್ಕಮಗಳೂರು ತಾಲೂಕು ಯೋಜನಾಧಿಕಾರಿ ಕೇಶವ ನಾಯ್ಕ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.