ಟ್ರ್ಯಾಕ್ಟರ್ ಉರುಳಿ ಸ್ಥಳದಲ್ಲೇ ವ್ಯಕ್ತಿ ಸಾವು
ಚಿಕ್ಕಮಗಳೂರು: ಮಣ್ಣು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಉರುಳಿ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಕನೇನಹಳ್ಳಿಯಲ್ಲಿ ಮಂಗಳವಾರ ನಡೆದಿದೆ. ಕೆ.ವಿ. ಸದಾನಂದಮೂರ್ತಿ (35) ಮೃತಪಟ್ಟ ದುರ್ದೈವಿ. ಕೆರೆಯ ಮಣ್ಣನು ಟ್ರ್ಯಾಕ್ಟರ್‌ನಲ್ಲಿ ಸಾಗಿಸುತ್ತಿದ್ದ ವೇಳೆಯಲ್ಲಿ ಮಣ್ಣು ತುಂಬಿದ ಟ್ರ್ಯಾಕ್ಟರ್ ಮೇಲೆ ಕೇತುಮಾರನಹಳ್ಳಿಯ ನಿವಾಸಿ ಕೆ.ವಿ. ಸದಾನಂದಮೂರ್ತಿ ಅವರು ಕುಳಿತುಕೊಂಡಿದ್ದರು. ಕಿರಿದಾದ ರಸ್ತೆಯಲ್ಲಿ ಟ್ರ್ಯಾಕ್ಟರ್ ಸಂಚರಿಸುತ್ತಿದ್ದ ವೇಳೆಗೆ ಪಕ್ಕದ ಕೆರೆಗೆ ಉರುಳಿ ಬಿದ್ದಿದ್ದು, ಅದರ ಅಡಿಯಲ್ಲಿ ಸಿಲುಕಿದ ಪರಿಣಾಮ ಸದಾನಂದಮೂರ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಬೆಂಕಿಗೆ ಹುಲ್ಲಿನ ಬಣವೆ ಭಸ್ಮ
ಬಾಳೆಹೊನೂರು: ಸಮೀಪದ ಹಿರೇಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಳಿಕೊಪ್ಪ ಸರಗಳ್ಳಿ ಪುಟ್ಟಪ್ಪನಾಯ್ಕರ ಕಣದಲ್ಲಿದ್ದ ಹುಲ್ಲಿನ ಬಣವೆಗೆ ಸೋಮವಾರ ರಾತ್ರಿ ಆಕಸ್ಮಿಕ ಬೆಂಕಿಬಿದ್ದು 15 ಸಾವಿರಕ್ಕೂ ಅಧಿಕ ನಷ್ಟ ಸಂಭವಿಸಿದೆ. ಬೆಂಕಿ ಆರಿಸಲು ಅಗಿಶಾಮಕ ದಳ ಘಟನಾ ಸ್ಥಳಕ್ಕೆ ಅಗಮಿಸಿದರೂ ಬೆಂಕಿ ಬಿದ್ದ ಸ್ಥಳಕ್ಕೆ ಹೋಗಲು ದಾರಿ ಇಲ್ಲದೆ ಪರದಾಡುವಂತಾಯಿತು. ಗ್ರಾಮಸ್ಥರು ಬೆಂಕಿ ಆರಿಸಲು ಸಹಕರಿಸಿದರು. ಪಕ್ಕದಲ್ಲೇ ಬತ್ತದ ಬಣವೆ ಇದ್ದು ಮುಂಜಾಗ್ರತೆಯಿಂದಾಗಿ ಬೆಂಕಿ ವ್ಯಾಪಿಸಲಿಲ್ಲ. ಸ್ಥಳಕ್ಕೆ ಗ್ರಾ.ಪಂ. ಅಧಿಕಾರಿಗಳು, ನಾಡ ಕಚೇರಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

