ಚಿಕ್ಕಮಗಳೂರು

ಅರಣ್ಯ ಹಕ್ಕು ಮಾನ್ಯ ಕಾಯ್ದೆ ವ್ಯಾಪ್ತಿ ವಿಸ್ತರಣೆ

Published On :

ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಫೆ.5
ಅನುಸೂಚಿತ ಬುಡಕಟ್ಟು ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಹಕ್ಕು ಮಾನ್ಯ ಮಾಡುವ ಕಾಯ್ದೆಯನ್ನು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಹೇಳಿದ್ದಾರೆ.
ತಮ್ಮ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಅನುಸೂಚಿತ ಬುಡಕಟ್ಟು ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳ ಅಧಿನಿಯಮ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಹಿಂದೆ ಗ್ರಾಮಗಳಿಗೆ ಸೀಮಿತವಾಗಿದ್ದ ಅರಣ್ಯ ಹಕ್ಕು ಮಾನ್ಯ ಮಾಡುವ ಕಾಯ್ದೆ ಮುನ್ಸಿಪಲ್, ಪಟ್ಟಣ ಪಂಚಾಯಿತಿ ಹಾಗೂ ನಗರಸಭೆಯ ವ್ಯಾಪ್ತಿಗೂ ಸಹ ಅನ್ವಯಿಸಲಾಗುತ್ತಿದೆ. ಈ ವ್ಯಾಪ್ತಿಯಲ್ಲಿ ಅರಣ್ಯ ಹಕ್ಕು ಸಮಿತಿಗಳನ್ನು, ಗ್ರಾಮ ಅರಣ್ಯ ಹಕ್ಕು ಸಮಿತಿಗಳ ಮಾದರಿಯಂತೆ ರಚಿಸಬೇಕು ಎಂದರು.
ಒಕ್ಕಲೆಬ್ಬಿಸುವಂತಿಲ್ಲ:  ಅರಣ್ಯ ಹಕ್ಕುಗಳ ಮಾನ್ಯತೆಗೆ ಅರ್ಜಿ ಸಲ್ಲಿಕೆ ನಿರಂತರವಾಗಿದೆ ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಪ್ರಚಾರ ನೀಡಬೇಕು. ಅರ್ಜಿಗಳನ್ನು ಪರಿಶೀಲಿಸಿ ಹಾಗೂ ಸ್ಥಳ ಪರಿಶೀಲನೆ ಮಾಡುವಾಗ ಕಂದಾಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ತಿರಸ್ಕೃತಗೊಂಡ ಅರ್ಜಿದಾರರಿಗೆ ಮೇಲ್ಮನವಿ ಸಲ್ಲಿಸಲು ಪ್ರಸ್ತುತ 60 ದಿನಗಳ ಕಾಲಾವಕಾಶಗಳನ್ನು 90 ದಿನಕ್ಕೆ ವಿಸ್ತರಿಸಲಾಗಿದೆ. ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳ ಅಧಿಬೋಗದಲ್ಲಿರುವ ಅರಣ್ಯ ಜಮೀನಿನಿಂದ ಅವರನ್ನು ಮಾನ್ಯತೆ ಮತ್ತು ಪರಿಶೀಲನಾ ಪ್ರಕ್ರಿಯೆ ಪೂರ್ಣವಾಗುವಂತೆ ಒಕ್ಕಲೆಬಿಸುವುದಾಗಲಿ ಅಥವಾ ಹೊರ ಹಾಕುವುದನ್ನು ಮಾಡುವಂತಿಲ್ಲ ಎಂದರು.
ಅರಣ್ಯ ಹಕ್ಕು ಸಮಿತಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಮಾಜಿಕ ಪ್ರೇರಕರು ಹಾಗೂ ಕಾರ್ಯಕರ್ತಗಳನ್ನು ನೇಮಿಸಿಕೊಳ್ಳಬೇಕು. ಅರಣ್ಯ ಹಕ್ಕು ಕಾಯ್ದೆಯಡಿ ಎಲ್ಲಾ ಅನುಷ್ಟಾನ ಅಧಿಕಾರಿಗಳಿಗೆ ಮತ್ತು ಅರಣ್ಯ ಹಕ್ಕು ಸಮಿತಿ ಸದಸ್ಯರಿಗೆ ಪರಿಣಾಮಕಾರಿ ತರಬೇತಿ ಕಾರ್ಯಾಗಾರ ಈಗಾಗಲೇ ಮಾಡಲಾಗಿದೆ. ಇದು ಸ್ಥಳಿಯವಾಗಿ ಮಾಡಬೇಕೆಂದು ಸಲಹೆ ನೀಡಿದರು.
ಸಮುದಾಯ ಹಕ್ಕುಗಳು ಅರ್ಜಿ ಸಲ್ಲಿಸಲು ಸಹ ಮಾನ್ಯತೆ ಮಾಡಲಾಗುವುದು. ಅರಣ್ಯ ಇಲಾಖೆ ಅಧಿಕಾರಿಗಳು, ಸಮಾಜ ಕಲ್ಯಾಣಾಧಿಕಾರಿ, ಗಿರಿಜನ ಸಮನ್ವಯಾಧಿಕಾರಿಗಳೊಂದಿಗೆ ಅರಣ್ಯ ಹಕ್ಕು ಕಾಯ್ದೆ ಅನುಷ್ಟಾನಗೊಳಿಸಬೇಕೆಂದು ಸೂಚಿಸಿದರು.
ಸಭೆಯಲ್ಲಿ ಜಿಪಂ ಕಾರ್ಯನಿರ್ವಹಣಾಧಿಕಾರಿ ಕರುಣಾಕರ್, ಉಪ ವಿಭಾಗಾಧಿಕಾರಿ ಚನ್ನಬಸಪ್ಪ, ಜಿಪಂ ಸದಸ್ಯರಾದ ರಂಗನಾಥ, ಟಿ.ಡಿ. ಲೋಕೇಶ್, ಕವಿತ ಚಂದ್ರು, ಅನುರಾಧ, ತಹಸೀಲ್ದಾರರು ಹಾಗೂ ಜಿಲ್ಲಾಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.