ಅಸಮರ್ಪಕ ವಿದ್ಯುತ್: ಮೆಸ್ಕಾಂಗೆ ಮುತ್ತಿಗೆ
ಕ.ಪ್ರ.ವಾರ್ತೆ, ಮೂಡಿಗೆರೆ, ಫೆ.5
ಕಳಸದಲ್ಲಿ ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ಸಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದರು.
ಪಟ್ಟಣದ ಮುಖ್ಯ ಬೀದಿಗಳಲ್ಲಿ ಮೆಸ್ಕಾಂ ಹಾಗೂ ಶಾಸಕರ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆ ಹಿನ್ನೆಲೆ ಅಂಗಡಿ ಮುಂಗಟ್ಟು ಮಾಲೀಕರು 1 ಗಂಟೆಗಳ ವ್ಯಾಪಾರ ಬಂದ್ ಮಾಡಿ ಬೆಂಬಲಿಸಿದರು.
ಈ ಸಂದರ್ಭ ಮಾತನಾಡಿದ ಸಿಪಿಐ ತಾಲೂಕು ಕಾರ್ಯದರ್ಶಿ ಗೋಪಾಲ ಶೆಟ್ಟಿ, ಕಳೆದ ಒಂದು ವಾರಗಳ ಹಿಂದೆ ರಾತ್ರಿ ಪಂಜಿನ ಮೆರವಣಿಗೆ ಮಾಡಿ ಮೆಸ್ಕಾಂ ವಿರುದ್ಧ ಪ್ರತಿಭಟಿಸಲಾಗಿತ್ತು. ಆಗ ಸದ್ಯದಲ್ಲಿಯೇ ಸಮಸ್ಯೆ ಪರಿಹರಿಸುವುದಾಗಿ ಮೆಸ್ಕಾಂ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ ವಿದ್ಯುತ್ ಸಮಸ್ಯೆ ಇಂದಿಗೂ ಸಮಸ್ಯೆಯಾಗಿಯೇ ಉಳಿದಿದೆ ಎಂದರು.
ಈ ನಿಟ್ಟಿನಲ್ಲಿ ಮತ್ತೆ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಕಳಸ ಹೋಬಳಿಯಲ್ಲಿ ಸಮರ್ಪಕ ರೀತಿಯಲ್ಲಿ ವಿದ್ಯುತ್ ಪೂರೈಕೆ ಮಾಡುವ ತನಕ ನಾವು ಕಚೇರಿ ಬಿಟ್ಟು ಕದಲುವುದಿಲ್ಲ. ಕಚೇರಿಯ ಮುಂದೆ ನಿದ್ರೆ ಮಾಡುವ ಮೂಲಕ ಖಂಡಿಸಲಾಗುವುದು ಎಂದು ಹೇಳಿ ಮೆಸ್ಕಾಂ ಕಚೇರಿ ಬಳಿಯೇ ಪ್ರತಿಭಟನಾನಿರತರು ಮಲಗಿದರು.
ನಂತರ ಪ್ರತಿಕ್ರಿಯಿಸಿದ ಮೆಸ್ಕಾಂ ಅಧಿಕಾರಿ ದಿವಾಕರ್ ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ 2 ವಿದ್ಯುತ್ ಸ್ಥ್ಥಾವರಗಳು ಕಲ್ಲಿದ್ದಲು ಸಮಸ್ಯೆಯಿಂದ ಸ್ಥಗಿತಗೊಂಡಿವೆ. ಈ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ತೊಂದರೆಗಳು ಆಗುತ್ತಿತ್ತು. ಆದರೆ ಈಗ ಸಮಸ್ಯೆ ಬಗೆಹರಿದಿದೆ. ನಾಳೆಯಿಂದಲೇ ಸಮರ್ಪಕ ವಿದ್ಯುತ್ ಪೂರೈಸಲಾಗುವುದು. ರಾತ್ರಿ ಸಮಯದಲ್ಲಿ ಮಾತ್ರ 1 ಗಂಟೆ ವಿದ್ಯುತ್ ಕಡಿತಗೊಳಿಸಲಾಗುವುದು. ಈ ಸಮಸ್ಯೆ ಕೂಡ ಒಂದು ವಾರದಲ್ಲಿ ಬಗೆಹರಿಯಲಿದೆ ಎಂದು ಭರವಸೆ ನೀಡಿದರು.
ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ಸಿಪಿಐ ಮುಖಂಡರಾದ ಪೆರಿಯಾಸ್ವಾಮಿ, ಅಣ್ಣಪ್ಪ, ವಜೀರ್ ಅಹಮ್ಮದ್, ರಾಜೇಶ್, ಶಾರದಾ ಶೆಟ್ಟಿ, ಉಷಾ, ಬಿ.ಆರ್.ಮಂಜುನಾಥ್, ಬಾಬು, ನಾರಾಯಣ, ವಸಂತ, ಭಾಗ್ಯ ಮುಂತಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

