ಚಿಕ್ಕಮಗಳೂರು

ಪೊಲೀಸರ ಸರ್ವಾಧಿಕಾರಿ ಧೋರಣೆ ತನಿಖೆಗೆ ಒತ್ತಾಯ

Published On :

ತರೀಕೆರೆ: ಭದ್ರಾ ಮೇಲ್ದಂಡೆ ಯೋಜನೆಯ ಎರಡನೇ ಹಂತದ ಕಾಮಗಾರಿ ಪ್ರಾರಂಭವಾಗಿದ್ದು, ಉಪ ವಿಭಾಗಾಧಿಕಾರಿಗಳು, ಪೊಲೀಸ್ ಉಪ ಅಧೀಕ್ಷಕರ ಸರ್ವಾಧಿಕಾರಿ ಧೋರಣೆಯನ್ನು ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
ಈ ಕುರಿತು ಮಾಜಿ ಶಾಸಕ ಬಿ.ಆರ್. ನೀಲಕಂಠಪ್ಪ, ಪತ್ರಕರ್ತ ಎ.ಆರ್.ಕೆ. ಶ್ರೀನಿವಾಸ್ ಮತ್ತು ತಾಲೂಕಿನ ರೈತರು ರಾಜ್ಯ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ತಾಲೂಕಿನ ರೈತರು ಕಳೆದ ಐದು ವರ್ಷಗಳಿಂದಲೂ ಅನೇಕ ರೀತಿಯ ಹೋರಾಟ, ಉಪವಾಸ ಸತ್ಯಾಗ್ರಹ ಮಾಡುತ್ತಾ ಬಂದಿರುತ್ತಾರೆ. ಅದರಂತೆ ಡಿಸೆಂಬರ್ 31ರಂದು ತರೀಕೆರೆ ತಾಲೂಕಿಗೆ ಸಮಗ್ರ ನೀರು ಬೇಕೆಂದು ನಡೆಸಿದ ಹೋರಾಟ ಬಂದ್ ಹಿನ್ನೆಲೆಯಲ್ಲಿ ಅಧಿಕಾರಿಗಳು ಅಜ್ಜಂಪುರ ಮತ್ತು ಭದ್ರಾ ಯೋಜನಾ ಸ್ಥಳಕ್ಕೆ ಬಂದು ರೈತರ ಆಗುಹೋಗುಗಳನ್ನು ಕೇಳಿ ಫೆ.8ರ ವರೆಗೆ ಕಾಮಗಾರಿಯನ್ನು ಸಂಪೂರ್ಣ ಸ್ಥಗಿತಗೊಳಿಸುತ್ತೇವೆ ಎಂದು ಭರವಸೆ ನೀಡಿದ್ದರು.
ಆದರೆ ಫೆ.1ರಂದು ಮುನ್ಸೂಚನೆ ಕೊಡದೆ, ಸಮಾಲೋಚನೆ ನಡೆಸದೆ ಸರ್ವಾಧಿಕಾರಿ ಧೋರಣೆಯಿಂದ ಕಾಮಗಾರಿಯನ್ನು ಪ್ರಾರಂಭಿಸಿದ್ದಾರೆ. ಹಿಂದಿನ ಮಾತಿನಂತೆ ಕಾಮಗಾರಿಯನ್ನು ನಿಲ್ಲಿಸಬೇಕೆಂದು ಶಾಂತ ರೀತಿಯಿಂದ ಮನವಿ ಮಾಡಿದರು. ಉಪ ವಿಭಾಗಾಧಿಕಾರಿಯವರು ಮಹಿಳೆಯರಿಗೆ ಗದರಿಸುವುದು ಹಾಗೂ ಸ್ವೇಚ್ಛಾ ರೀತಿಯಲ್ಲಿ ಮಾತನಾಡುವುದು ಇವರ ವರ್ತನೆಯಾಗಿತ್ತು.  ಫೆ.1ರಂದು ನೂರಾರು ರೈತ ಮಹಿಳೆಯರಲ್ಲಿ ಕೇವಲ 15 ಜನರನ್ನು ಬಂಧಿಸಿದ್ದು, ನ್ಯಾಯಾಲಯದಲ್ಲಿ ಬಿಡುಗಡೆಗೆ ಮನವಿ ಮಾಡಿಕೊಳ್ಳಲು ಅವಕಾಶ ಮಾಡದಂತೆ ವರ್ತಿಸಿರುತ್ತಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಪೊಲೀಸ್ ಉಪ ಅಧೀಕ್ಷಕರು ಸರ್ವಾಧಿಕಾರಿ ಧೋರಣೆಯಂತೆ ಕಾರ್ಯ ನಿರ್ವಹಿಸುತ್ತಿದ್ದು, ರೈತರಿಗೆ ತೊಂದರೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಅಧಿಕಾರಿಗಳನ್ನು ರಜದ ಮೇಲೆ ಹೋಗಲು ಆಜ್ಞೆ ಮಾಡಿ ಸಂಪೂರ್ಣವಾಗಿ ತನಿಖೆ ಮಾಡಬೇಕಾಗಿ ಆಗ್ರಹಿಸಲಾಗಿದೆ ಎಂದು ಹೇಳಿದ್ದಾರೆ.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.