ತೆಂಗು ಪುನಶ್ಚೇತನಕ್ಕೆ 40 ಕೋಟಿ ಬಿಡುಗಡೆ
ಚಿಕ್ಕಮಗಳೂರು: ರಾಜ್ಯದ 12 ಜಿಲ್ಲೆಗಳ ಬರಪೀಡಿತ ಪ್ರದೇಶ ಮತ್ತು ರೋಗ ಬಾಧಿತ ತೆಂಗಿನ ತೋಟಗಳ ಪುನಶ್ಚೇತನಕ್ಕೆ ಸರಕಾರ 40 ಕೋಟಿ ಬಿಡುಗಡೆ ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯೆ ಎಂ.ವಿ. ಗಾಯತ್ರಿ ಶಾಂತೇಗೌಡ ತಿಳಿಸಿದ್ದಾರೆ.
ರಾಜ್ಯದಲ್ಲಿ ತೆಂಗು ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, 4.92 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯಲಾಗಿದೆ. ಕಳೆದ 2-3 ವರ್ಷಗಳಿಂದ ಮಳೆಯ ಕೊರತೆಯಿಂದಾಗಿ ಬರದ ಜತೆಗೆ ಕೀಟಿ, ರೋಗ ಬಾಧೆಯಿಂದ ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶೇ.30-40 ರಷ್ಟು ತೆಂಗು ಬೆಳೆ ಹಾನಿಗೆ ಒಳಗಾಗಿದೆ. ತೆಂಗು ಬೆಳೆಗಾರರು ಆರ್ಥಿಕವಾಗಿ ಸಂಕಷ್ಟದಲ್ಲಿರುವುದನ್ನು ಗಮನಿಸಿ ಸರಕಾರ ಪುನಶ್ಚೇತನ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪರ್ಯಾಯ ಬೆಳೆಗೆ ಪ್ರೋತ್ಸಾಹ: ಡಾ. ಗೋರಕ್ ಸಿಂಗ್ ಮತ್ತು ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿಗಳ ಸಮಿತಿ ನೀಡಿರುವ ಶಿಫಾರಸ್ಸುಗಳ ಆಧಾರದಲ್ಲಿ ತೆಂಗಿನ ತೋಟಗಳ ಪುನಶ್ಚೇತನಕ್ಕಾಗಿ ಎರಡು ಘಟಕಗಳನ್ನಾಗಿ ವಿಂಗಡಿಸಿ ಅನುಷ್ಠಾನಕ್ಕೆ ತರಲು ಕಾರ್ಯಕ್ರಮ ರೂಪಿಸಲಾಗಿದೆ.
ತೋಟಗಳಲ್ಲಿ ಸಂಪೂರ್ಣ ಒಣಗಿರುವ ತೆಂಗಿನ ಗಿಡಗಳನ್ನು ಬುಡ ಸಹಿತ ತೆಗೆದು ಪರ್ಯಾಯ ಬೆಳೆಗಳನ್ನು ಬೆಳೆಯಲು ಉತ್ತೇಜಿಸಲಾಗುತ್ತದೆ. ಭಾಗಶಃ ಹಾನಿಗೊಂಡಿರುವ ತೆಂಗಿನ ತೋಟಗಳನ್ನು ವೈಜ್ಞಾನಿಕವಾಗಿ ಪುನಶ್ಚೇತನಗೊಳಿಸುವುದು ಯೋಜನೆಯ ಉದ್ದೇಶ ಎಂದು ತಿಳಿಸಿದ್ದಾರೆ.
ರಾಜ್ಯದ 12 ಜಿಲ್ಲೆಗಳಲ್ಲಿ ಬರ ಪೀಡಿದ ಪ್ರದೇಶಗಳು ಹೆಚ್ಚಾಗಿವೆ
- ಗಾಯತ್ರಿ ಶಾಂತೇಗೌಡ
ವಿಪ ಸದಸ್ಸೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

