ಚಿಕ್ಕಮಗಳೂರು

ಕಾಂಗ್ರೆಸ್ ಸಾಧನೆ ಜನಮನ ತಲುಪಲಿ

Published On :

ಚಿಕ್ಕಮಗಳೂರು: ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ನಡುವೆ ಅವಿನಾಭಾವ ಸಂಬಂಧ ಹೊಂದಿ ಒಕ್ಕೊರಲರಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜನಪರ ಯೋಜನೆಗಳನ್ನು ಜನರ ಮನಮುಟ್ಟುವಂತೆ ತಿಳಿಸಿದಾಗ ಪಕ್ಷದ ಮೇಲೆ ವಿಶ್ವಾಸ ಹೆಚ್ಚಿ ಅಭ್ಯರ್ಥಿ ಗೆಲುವಿಗೆ ಸಹಕಾರಿ ಆಗುತ್ತದೆ ಎಂದು ಕೆಪಿಸಿಸಿ ಕಾರ್ಯದರ್ಶಿ, ಪಕ್ಷದ ವೀಕ್ಷಕರಾದ ಎಚ್.ಮೋಹನ್ ಹೇಳಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆ ಕುರಿತಂತೆ ನಗರದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮತ್ತು ಮುಖಂಡರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.  ಹೋಬಳಿ ಮತ್ತು ಬ್ಲಾಕ್ ಮಟ್ಟದಲ್ಲಿ ಸಮಾವೇಶಗಳನ್ನು ಮಾಡುವ ಮೂಲಕ ಜಾತ್ಯತೀತವಾಗಿ ಬಡಜನರ ಶ್ರೇಯೋಭಿವೃದ್ಧಿ ಹೊಂದಿ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸಬೇಕು. ಮತದಾರರ ಗಮನಹರಿಸಬೇಕು. ಇಲ್ಲಿನ ಸಂಸದರು ಸೌಮ್ಯ ಸ್ವಭಾವದ ಕಡಿಮೆ ಅವಧಿಯಲ್ಲಿ ಹೆಚ್ಚು ಅಭಿವೃದ್ಧಿ ಕೆಲಸ ಮಾಡಿದ ವ್ಯಕ್ತಿ, ಇಂತಹ ಪ್ರಾಮಾಣಿಕ ಜನಪ್ರತಿನಿಧಿಯನ್ನು ಕ್ಷೇತ್ರದ ಜನ ಮರು ಆಯ್ಕೆ ಮಾಡುವುದರಲ್ಲಿ ಸಂದೇಹವಿಲ್ಲ ಎಂದರು. ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿ, ನನಗೆ ಸಿಕ್ಕ ಅಲ್ಪವಧಿಯಲ್ಲಿ ನಿರಂತರವಾಗಿ ಜನಸಂಪರ್ಕದ ಮೂಲಕ ಸ್ಪಂದಿಸಿದ್ದೇನೆ. ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಜನಸಾಮಾನ್ಯರ ಮೂಲಭೂತ ಸಮಸ್ಯೆಗಳಿಗೆ ಹೆಚ್ಚು ಒತ್ತು ಕೊಟ್ಟು ಕೆಲಸ ಮಾಡಿದ್ದೇನೆ. ಹಿಂದಿನ ಬಿಜೆಪಿ ಸರ್ಕಾರ ಜನರಿಗೆ ಬಳುವಳಿಯಾಗಿ ಬಿಟ್ಟು ಹೋದ ಅಡಕೆ, ಕಾಫಿ, ತೆಂಗು, ಭದ್ರಾ ಮೇಲ್ದಂಡೆ ಯೋಜನೆ, ಇನಾಂ ಭೂಮಿ ಸೇರಿದಂತೆ ಅನೇಕ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಸರ್ಕಾರದ ಮೇಲೆ ಗೂಬೆ ಕೂರಿಸಿ ನುಣುಚಿ ಕೊಳ್ಳುತ್ತಿರುವುದು ಬಿಜೆಪಿಯ ಸಾಧನೆ ಎಂದು ವ್ಯಂಗ್ಯವಾಡಿದ ಅವರು, ಈ ಸಮಸ್ಯೆ ಬಗೆಹರಿಸುವ ಕುರಿತಂತೆ ಕೇಂದ್ರದಲ್ಲಿ ಸಂಬಂಧಪಟ್ಟ ಮಂತ್ರಿಗಳ ಜೊತೆ ನಿರಂತರವಾಗಿ ಚರ್ಚಿಸಲಾಗಿದೆ ಎಂದು ಹೇಳಿದರು.  ಜಿಲ್ಲಾಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರಗಳು ಮಾಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಶ್ರಮವಹಿಸಿ ನಿಷ್ಠೆಯಿಂದ ಜನರಿಗೆ ಮುಟ್ಟಿಸಿದರೆ ಇನ್ನಷ್ಟು ಗಟ್ಟಿಯಾಗುತ್ತೇವೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.