ಚಿಕ್ಕಮಗಳೂರು

ಕಳ್ಳಭಟ್ಟಿ ತಯಾರಿಕೆ ಪತ್ತೆ: ವ್ಯಕ್ತಿ ಬಂಧನ

Published On :

ಚಿಕ್ಕಮಗಳೂರು: ಕಳ್ಳಭಟ್ಟಿ ತಯಾರಿಕೆ ಅಡ್ಡೆಯ ಮೇಲೆ ದಾಳಿ ನಡೆಸಿದ ಜಿಲ್ಲಾ ಅಬಕಾರಿ ಜಾರಿ ಮತ್ತು ಲಾಟರಿ ನಿಷೇಧ ದಳವು ಕಳ್ಳಭಟ್ಟಿ ಪರಿಕರಗಳನ್ನು ವಶಪಡಿಸಿಕೊಂಡಿದೆ. ಖಚಿತ ಮಾಹಿತಿಯ ಮೇರೆಗೆ ಚಿಕ್ಕಮಗಳೂರು ತಾಲೂಕಿನ ಹೊಸಂಬಳ ಗ್ರಾಮದ ಚಂದ್ರ ಎಂಬಾತನು ತನ್ನ ಗ್ರಾಮದ ಹೊಸಂಬಳ ವಟ್ಟಿಗೆರೆ ಸರ್ಕಾರಿ ಕಾಡಿನ ಕಲ್ಲುಬಂಡೆಯ ಮರೆಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ತಯಾರಿಕೆ ಮಾಡುತ್ತಿರುವುದು ಪತ್ತೆಯಾಗಿದ್ದು, 6 ಲೀ. ಕಳ್ಳಭಟ್ಟಿ ಸಾರಾಯಿ, 165 ಲೀ. ಬೆಲ್ಲದ ಕೊಳೆ, ಮತ್ತು ಅದನ್ನು ತಯಾರು ಮಾಡಲು ಉಪಯೋಗಿಸುವ ಪರಿಕರ ಸೇರಿದಂತೆ 10,365 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಚಂದ್ರನನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ. ಜಿಲ್ಲಾ ಅಬಕಾರಿ ಜಾರಿ ಮತ್ತು ಲಾಟರಿ ನಿಷೇಧ ದಳದ ನಿರೀಕ್ಷಕ ದೇವಪ್ಪ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಪುಟ್ಟಸ್ವಾಮಿ, ಹೆಚ್. ಉಮೇಶ್ ರಾಜೇ ಅರಸು, ಕುಮಾರ್, ಮೋಹನ್ ಕುಮಾರ್, ಮಹೇಶ್, ಪ್ರವೀಣ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.