ಚಿಕ್ಕಮಗಳೂರು

ಇಂದಿನ ಬಂದ್ ಬೆಂಬಲಿಸಲು ತಾಲೂಕು ರೈತ ಸಂಘ ಮನವಿ

Published On :

ಶೃಂಗೇರಿ: ಪಟ್ಟಣದಲ್ಲಿ ರೈತಪರ ಸಂಘಟನೆಗಳು ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಳೆದ ಜನವರಿ 27 ರಿಂದ ಆರಂಭಿಸಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ 14 ನೇ ದಿನಕ್ಕೆ ಕಾಲಿಟ್ಟರೂ ಯಾವುದೇ ಸರ್ಕಾರ, ಅಧಿಕಾರಿಗಳು ಇತ್ತ ಗಮನ ಹರಿಸದೇ ಬೇಜವಾಬ್ದಾರಿ ತೋರುವ ಮೂಲಕ ರೈತ ಸಮುದಾಯದ ಸಮಸ್ಯೆಯನ್ನು ಕಡೆಗಣಿಸುತ್ತಿದ್ದಾರೆ ಎಂದು ತಾಲೂಕು ರೈತಸಂಘದ ಅಧ್ಯಕ್ಷ ತೊರೊಳ್ಳಿ ಗೋಪಾಲ ನಾಯ್ಕ್ ಆರೋಪಿಸಿದರು.
ಅವರು ಪಟ್ಟಣದ ತಾಲೂಕು ಕಚೇರಿ ಎದುರು ನಡೆಯುತ್ತಿರುವ ಧರಣಿಯಲ್ಲಿ ಮಾತನಾಡಿ, ಕೇಂದ್ರ, ರಾಜ್ಯ ಸರ್ಕಾರಗಳು ಇದುವರೆಗೆ ಯಾವುದೇ ರೀತಿಯಲ್ಲಿ ರೈತರ ಬೇಡಿಕೆಗಳಿಗೆ ಸ್ಪಂದಿಸಿಲ್ಲ. ಹಳದಿ ಎಲೆ ರೋಗ ರೈತರ ಸಂಕಷ್ಟಗಳಿಗೆ ಸ್ಪಂದಿಸಬೇಕು ಎಂದರು.
ರೈತರ ಸಂಕಷ್ಟ ಮುಂದಿಟ್ಟುಕೊಂಡು ನಿರಂತರ ಹೋರಾಟ ಧರಣಿ ಸತ್ಯಾಗ್ರಹ ನಡೆಸುತ್ತಿದ್ದರೂ, ಇತ್ತ ಗಮನ ಹರಿಸದ ಕಾರಣ ಫೆ. 10 ಸೋಮವಾರ ಶೃಂಗೇರಿಯಲ್ಲಿ ಸ್ವಯಂ ಪ್ರೇರಿತ್ ಬಂದ್‌ಗೆ ಕರೆ ನೀಡಲಾಗಿದೆ. ಈ ನಿಟ್ಟಿನಲ್ಲಿ ವಿವಿಧ ಪಕ್ಷದವರು, ವಾಹನ ಮಾಲೀಕರು, ಚಾಲಕರು, ಶಿಕ್ಷಣ ಸಂಸ್ಥೆಗಳು ಬಂದ್‌ಗೆ ಸಂಪೂರ್ಣ ಬೆಂಬಲಿಸಬೇಕು ಎಂದು ವನವಿ ಮಾಡಿದರು.
ಬೆಳಗ್ಗೆ 6 ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ಬಂದ್ ನಡೆಸಲಾಗುತ್ತಿದ್ದು, ಬೆಳಗ್ಗೆ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿದೆ. ನಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಜೆಡಿಯು ಭರತ್ ಮಾತನಾಡಿದರು. ಕಾನೋಳ್ಳಿ ಚಂದ್ರಶೇಖರ್, ಕೆಳವಳ ಇಗುಂಡಪ್ಪ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.