ಚಿಕ್ಕಮಗಳೂರು

ಸುದ್ದಿ ಸಂಕ್ಷೇಪ

Published On :

ಪರೀಕ್ಷಾ ಕೇಂದ್ರಕ್ಕೆ ಡಿಡಿಪಿಐ ಭೇಟಿ
ತರೀಕೆರೆ.: ಪಟ್ಟಣದ ಸರ್ಕಾರಿ ಬಾಲಕಿಯರ ಪ.ಪೂ. ಕಾಲೇಜಿನಲ್ಲಿ ನಡೆದ ಜವಾಹರ್ ನವೋದಯ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾ ಡಿಡಿಪಿಐ ರಾಜಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಹರಿಪ್ರಸಾದ್ ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ನಂತರ ಸುದ್ದಿಗಾರರೊಡನೆ ಮಾತನಾಡಿದ ಡಿಡಿಪಿಐ ರಾಜಪ್ಪ, ಪಟ್ಟಣದ 3 ಕೇಂದ್ರಗಳಲ್ಲಿ ನವೋದಯ ಪರೀಕ್ಷೆ ನಡೆಯುತ್ತಿದ್ದು ಒಟ್ಟು 791 ಮಕ್ಕಳು ಪರೀಕ್ಷೆಗೆ ಕುಳಿತಿದ್ದಾರೆ ಪರೀಕ್ಷೆಯಲ್ಲಿ ಆಯ್ಕೆಯಾದ ಮಕ್ಕಳಿಗೆ 6ನೇ ತರಗತಿಯಿಂದ 12ನೇ ತರಗತಿ ವರೆಗೆ ಉಚಿತ ಶಿಕ್ಷಣ ದೊರೆಯುತ್ತದೆ ಎಂದು ತಿಳಿಸಿದರು. ಉಪಪ್ರಾಚಾರ್ಯ ಸೋಮಶೇಖರ್ ಮೊದಲಾದವರು ಹಾಜರಿದ್ದರು.
ಸ್ವ ಉದ್ಯಮದತ್ತ ಗಮನಹರಿಸಿ
ಕಡೂರು:  ಸರ್ಕಾರಿ ಕೆಲಸ ಕಾಯುವ ಬದಲು ಸ್ವಯಂ ಉದ್ಯಮದತ್ತ ಆಸಕ್ತಿ ವಹಿಸಿದಲ್ಲಿ, ತಾನು ಬೆಳೆಯುವ ಜೊತೆ ನೂರಾರು ಕೈಗಳಿಗೂ ಕೆಲಸ ನೀಡಿ, ದೇಶದ ಆಸ್ತಿಯಾಗಬಲ್ಲನು ಎಂದು ದಾವಣಗೆರೆ ಸ.ಪ್ರ.ದ. ಕಾಲೇಜು ಪ್ರಾಂಶುಪಾಲ ಡಾ ಜಿ.ಎನ್. ಮಲ್ಲಿಕಾರ್ಜುನಪ್ಪ ಹೇಳಿದರು.
ಅವರು ಕಡೂರು ಪಟ್ಟಣದ ಎಂ.ಎಸ್.ಆರ್. ಶಾಲೆಯ ದೇಸೀ ಉತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಉತ್ತಮ ಮೌಲ್ಯ: ಮೌಲ್ಯಗಳಿಗೆ ಅನುಗುಣವಾಗಿ ಶಿಕ್ಷಣ ನೀಡಿದಲ್ಲಿ ಅದೇ ಮೌಲ್ಯಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಉತ್ತಮವಾಗಿ  ರೂಪುಗೊಳ್ಳುತ್ತಾರೆ. ಸಂಸ್ಕೃತಿ, ತಳಹದಿ ಮತ್ತು ಪೋಷಕರ ಪ್ರೋತ್ಸಾಹದಿಂದ ಉತ್ತಮ ವಿದ್ಯೆ ಕಲಿಸಿದಲ್ಲಿ ಆ ಮೌಲ್ಯಗಳಿಗೆ ಬೆಲೆ ಸಿಗುತ್ತದೆ ಎಂದವರು ಹೇಳಿದರು.
ಅನುಕರಣೆ ಹಾದಿ: ಅಧ್ಯಕ್ಷತೆ ವಹಿಸಿದ್ದ ವಿದ್ಯಾನಿಧಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಕೆ.ವಿ. ವಾಸು ಮಾತನಾಡಿ, ಇಂದು ನಾವು ನಮ್ಮತನ ಬಿಟ್ಟು ಕೇವಲ ಅನುಕರಣೆ ಹಾದಿ ಹಿಡಿಯುತ್ತಿದ್ದೇವೆ. ನಮ್ಮ ಮಕ್ಕಳಲ್ಲಿರುವ ಪ್ರತಿಭೆಗಳ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಬೇಕಿದೆ. ಆದರೆ ಇಂದಿನ ದಿನಗಳಲ್ಲಿ ಪ್ರತಿಭಾ ಪ್ರದರ್ಶನಕ್ಕಿಂತ ತೋರಿಕೆಯೇ ಹೆಚ್ಚಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿ ಮೌನರವರಿಗೆ ರು. 5,000 ಪುರಸ್ಕಾರ ನೀಡಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ರಂಗನಾಥ್ ಕಾರ್ಯಕ್ರಮ ಉದ್ಘಾಟಿಸಿದರು. ಶಾಲೆಯ ಕಾರ್ಯದರ್ಶಿ ಕೆ.ಜಿ. ಅಣ್ಣಪ್ಪ ವರದಿ ನೀಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿದ್ಯಾನಿಧಿ ಸಂಸ್ಥೆ ನಿರ್ದೇಶಕ ಚಂದ್ರಶೇಖರ್, ಶೇಖರಪ್ಪ, ಹರೀಶ್, ವಿಜಯಕುಮಾರ್, ಸಿ.ಎಲ್. ದೇವರಾಜ್, ವಿರೂಪಾಕ್ಷ ಮೊದಲಾದವರು ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.