ತಾ.ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ಸಹಕಾರ
ಕ.ಪ್ರ.ವಾರ್ತೆ, ತರೀಕೆರೆ, ಫೆ.11
ಪಟ್ಟಣದಲ್ಲಿ 12ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸಿಯಾಗಿ ನೆರವೇರಲು ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದ್ದಾರೆ.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಮಂಗಳವಾರ ಶಾಸಕರ ನಿವಾಸಕ್ಕೆ ತೆರಳಿ ತಾಲೂಕು ಸಾಹಿತ್ಯ ಸಮ್ಮೇಳನ ನೆಡೆಸುವ ಕುರಿತು ಚರ್ಚಿಸಿದ ಸಂದರ್ಭ ಅವರು ಮಾತನಾಡಿದರು.
ಆಮಂತ್ರಣ: ಪರಿಷತ್ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಒಂದು ದಿನ ನಡೆಯಲಿರುವ ಸಮ್ಮೇಳನದಲ್ಲಿ ಜಿಲ್ಲೆಯ ಮತ್ತು ತಾಲೂಕಿನ ಸಾಹಿತಿಗಳು, ಬರಹಗಾರರು, ಕಲಾವಿದರು, ಪತ್ರಕರ್ತರು ಪಾಲ್ಗೊಳ್ಳಲಿದ್ದಾರೆ.
ಸಮ್ಮೇಳನದಲ್ಲಿ ಉದ್ಘಾಟನಾ ಸಮಾರಂಭ, ಸಾಹಿತ್ಯ ಗೋಷ್ಠಿ, ಕವಿಗೋಷ್ಠಿ, ವಿಚಾರ ಸಂಕಿರಣ, ಮಹಿಳಾ ಗೋಷ್ಠಿಗಳನ್ನು ಏರ್ಪಡಿಸಲಾಗುವುದು ಎಂದರು.
ಶಾಸಕ ಜಿ.ಎಚ್.ಶ್ರೀನಿವಾಸ್ ಅವರು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾಗಿದ್ದು ಮತ್ತು ಸಮ್ಮೇಳನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಆಭಯಚಂದ್ರ ಜೈನ್, ಜಿಲ್ಲೆಯ ಸಂಸದರು, ಶಾಸಕರು ಅವರನ್ನು ಆಹ್ವಾನಿಸಲಾಗುವುದು ಎಂದು ಪರಿಷತ್ ಅಧ್ಯಕ್ಷ ಜಿ.ಸುಬ್ರಹ್ಮಣ್ಯ ತಿಳಿಸಿದರು.
ಸಮ್ಮೇಳನದಲ್ಲಿ ಪುರಸಭಾ ಸದಸ್ಯರು, ತಾ.ಪಂ., ಜಿ.ಪಂ. ಸದಸ್ಯರು ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಲಿದ್ದಾರೆ ಎಂದರು.
ಪರಿಷತ್ ಅಧ್ಯಕ್ಷ ಜಿ.ಸುಬ್ರಹ್ಮಣ್ಯ, ಕಾರ್ಯದರ್ಶಿ ಚಂದ್ರಶೇಖರ್, ಕನ್ನಡಶ್ರೀ ಬಿ.ಎಸ್. ಭಗವಾನ್, ತಾಲೂಕು ಗಮಕ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ರಾಮಪ್ಪ, ಅಮೃತಾಪುರ ಹೋಬಳಿ ಕಸಾಪ ಅಧ್ಯಕ್ಷ ನಾಗೇನಹಳ್ಳಿ ತಿಮ್ಮಯ್ಯ, ತಾ.ಪತ್ರಕರ್ತರ ಸಂಘದ ಅಧ್ಯಕ್ಷ ಸುರೇಶ್ಚಂದ್ರ, ಲೇಖಕ ತ.ಮ.ದೇವಾನಂದ್, ಎಚ್.ಸಿ.ಗೋಪಾಲಕೃಷ್ಣ, ಮಾಜಿ ಪುರಸಭಾಧ್ಯಕ್ಷ ಚಂದ್ರಶೇಖರ್, ಪ್ರದೀಪ್ ಶರ್ಮ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

