ಚಿಕ್ಕಮಗಳೂರು

ಅರಣ್ಯ ಇಲಾಖೆ ಹಸ್ತಕ್ಷೇಪವಿಲ್ಲ

Published On :

ಬೆಂಗಳೂರು: ಚಿಕ್ಕಮಗಳೂರಿನಲ್ಲಿ ಇನಾಂ ಭೂಮಿ ತೆರವು ಪ್ರಕರಣದಲ್ಲಿ ಅರಣ್ಯ ಇಲಾಖೆ ಪಾತ್ರವೇನೂ ಇಲ್ಲ. ನಮ್ಮ ಇಲಾಖೆ ಸಣ್ಣ ಹಿಡುವಳಿದಾರರ ಪರವಾಗಿದ್ದು, ನ್ಯಾಯಾಲಯದ ನಿರ್ದೇಶನದಂತೆ ಒತ್ತುವರಿ ತೆರವಾಗುತ್ತಿದೆ. ಇದರಲ್ಲಿ ಅರಣ್ಯ ಇಲಾಖೆ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಅರಣ್ಯ ಖಾತೆ ಸಚಿವ ರಮಾನಾಥ ರೈ ಸ್ಪಷ್ಟಪಡಿಸಿದ್ದಾರೆ.
ಈ ವಿಷಯದ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಎರಡು ಬಾರಿ ಮಾತುಕತೆ ನಡೆಸಿದ್ದೇನೆ. ಇದು ಕಾನೂನು ವ್ಯಾಪ್ತಿಗೆ ಬರುವ ವಿಷಯ. ನ್ಯಾಯಾಲಯ ಹೇಳಿದ ಹಾಗೆ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಸರ್ಕಾರ ಏನು ಮಾಡಬೇಕೋ ಅದನ್ನು ಮಾಡಲಿದೆ. ಸಣ್ಣ ಹಿಡುವಳಿದಾರರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.
“tÞÈÚáéu ±ÛÁæÑéo’«ÚÆÇ ಅರಣ್ಯ ಪರಿಸರ ಇರುವ ಜಾಗವೇ ಇಲ್ಲ. ಇಲ್ಲಿ ಮನೆಗಳಿವೆ. ಇವುಗಳನ್ನು ಅವರಿಗೇ ಬಿಟ್ಟುಕೊಡಲು ಕಾನೂನುಬದ್ಧವಾದ ಕ್ರಮ ಕೈಗೊಳ್ಳಲು ಸಿದ್ಧರಿದ್ದೇವೆ. ಈ ವಿಷಯ ಸಚಿವ ಸಂಪುಟದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಕೆಲವರಿಗೆ ಹಕ್ಕುಪತ್ರವನ್ನೂ ಈ ಪ್ರದೇಶದಲ್ಲಿ ನೀಡಲಾಗಿದೆ. ಹೀಗಾಗಿ ಪರಿಹಾರ ನೀಡಲಾಗುತ್ತದೆ ಎಂದರು.
ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಅರಣ್ಯ ಪರಿಸರ ಇರುವ ಪ್ರದೇಶವನ್ನು ಅರಣ್ಯ ಇಲಾಖೆ ಸುಪರ್ದಿಗೆ ನೀಡಲು ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಶೇ.22ರಷ್ಟು ಅರಣ್ಯ ಇದೆ. ಇದನ್ನು ಶೇ.33ಕ್ಕೆ ವೃದ್ಧಿಸುವ ಗುರಿ ಹೊಂದಲಾಗಿದೆ ಎಂದರು.
ಅರಣ್ಯ ಗಡಿಯಲ್ಲಿ ರೈತರು ತಮ್ಮ ಜಮೀನುಗಳಿಗೆ ಸೋಲಾರ್ ಫೆನ್ಸಿಂಗ್ ಅಳವಡಿಸಿಕೊಳ್ಳಲು ಸರ್ಕಾರ ಶೇ.50ರಷ್ಟು ಸಬ್ಸಿಡಿ ನೀಡಲು ಸಿದ್ಧವಿದೆ. ಇದಕ್ಕಾಗಿ ಈ 55 ಕೋಟಿ ಮೀಸಲಿಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಹಣ ಹೆಚ್ಚಿಸಲಾಗುತ್ತದೆ ಎಂದು ಸಚಿವ ರಮಾನಾಥ ರೈ ತಿಳಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.