ಚಿಕ್ಕಮಗಳೂರು

ರಂಗನಾಥ ಸ್ವಾಮಿ ಜಾತ್ರೆ ಇಂದಿನಿಂದ

Published On :

ನರಸಿಹಂರಾಜಪುರ: ಕೂಸಗಲ್ಲು ರಂಗನಾಥ ಸ್ವಾಮಿಯ ಜಾತ್ರೆಯು ಫೆಬ್ರವರಿ 13 ರಿಂದ 15 ರ ವರೆಗೆ ನಡೆಯಲಿದೆ ಎಂದು ಕೂಸಗಲ್ಲು ರಂಗನಾಥ ಸ್ವಾಮಿ ದೇವಸ್ಥಾನದ ಸಮಿತಿಯ ಪ್ರಕಟಣೆ ತಿಳಿಸಿದೆ.
ಫೆ.13 ರ ಗುರುವಾರ ಧ್ವಜಾರೋಹಣ,ಶ್ರೀ ಸ್ವಾಮಿ ಮತ್ತು ಚೆನ್ನಮ್ಮದೇವಿಗೆ ಅಲಂಕಾರ, ಪೂಜೆ,ಮಹಾ ಮಂಗಳಾರತಿ ನಡೆಯಲಿದೆ. ಫೆ.14 ರಂದು ಅಳೇಹಳ್ಳಿಯಿಂದ ಬರುವ ಮತ್ತು ಕಂಕಳ್ಳಿ ರಂಗನಾಥಸ್ವಾಮಿ ದೇವರಿಗೆ ಸ್ವಾಗತ ಬಯಸುವುದು. ಫೆ.15 ರ ಶನಿವಾರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ರಂಗನಾಥಸ್ವಾಮಿ ಮತ್ತು ಚೆನ್ನಮ್ಮದೇವಿಗೆ ಪೂಜೆ ಮಹಾಮಂಗಳಾರತಿ ನಡೆಯಲಿದೆ.
ನಾಳೆ ಸಭೆ
ಕೊಪ್ಪ: ತಾಲೂಕು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಸಭೆ ಇಲ್ಲಿನ ಪುರಭವನದಲ್ಲಿ ಫೆ.14ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವನಮಾಲ ಮೃತ್ಯುಂಜಯ ಅಧ್ಯಕ್ಷತೆಯಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.
ಪಟ್ಟಣ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ. ಶೋಭಿಂತ್ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದು, ಪಟ್ಟಣ ಘಟಕದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್, ಜಿಪಂ ಮಾಜಿ ಅಧ್ಯಕ್ಷ ಟಿ.ಡಿ. ರಾಜೇಗೌಡ ಮೊದಲಾದವರು ಪಾಲ್ಗೊಳ್ಳಲಿದ್ದಾರೆಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಓಣಿತೋಟ ರತ್ನಾಕರ್ ತಿಳಿಸಿದ್ದಾರೆ.
ಇಂದು ರುದ್ರಾಭಿಷೇಕ
ನರಸಿಂಹರಾಜಪುರ: ಪಟ್ಟಣದ ಹಳೇ ಮಂಡಗದ್ದೆ ಸರ್ಕಲ್ ಸಮೀಪದ ಈಶ್ವರ ದೇವಸ್ಥಾನದಲ್ಲಿ 4 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಫೆಬ್ರವರಿ 13 ರ ಗುರುವಾರ ರುದ್ರಾಭಿಷೇಕ, ರುದ್ರಹೋಮ, ಮಹಾ ಮಂಗಳಾರತಿ ನಡೆಯಲಿದೆ ಎಂದು ದೇವಸ್ಥಾನ ಸಮಿತಿಯ ಕಾರ್ಯದರ್ಶಿ ವೈ.ಎಸ್.ರವಿ ತಿಳಿಸಿದ್ದಾರೆ. ಬಾಳೆಹೊನ್ನೂರಿನ ರಂಭಾಪುರಿ ಪೀಠದ ವೇ.ಬ್ರ. ದ್ವಾರಕ ಶಾಸ್ತ್ರಿ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಭಕ್ತಾದಿಗಳು ಆಗಮಿಸಬೇಕು ಎಂದು ಈಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಗುರುಶಾಂತಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.