ಚಿಕ್ಕಮಗಳೂರು

'ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ'

Published On :

ಶೃಂಗೇರಿ: ವಿದ್ಯಾರ್ಥಿಗಳು ಶಾಲೆಯಲ್ಲಿ ಸಿಗುವ ಸೌಲಭ್ಯವನ್ನು ಸಮರ್ಪಕ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಿಪಂ ಸಾಮಾಜಿಕ ಸಮಿತಿ ಅಧ್ಯಕ್ಷ ಬಿ. ಶಿವಶಂಕರ್ ಸಲಹೆ ನೀಡಿದರು. ತಾಲೂಕಿನ ಬೇಗಾರು ಪಂಚಾಯಿತಿ ಬೇಗಾರು ಎಚ್.ಕೆ. ರಾಮಣ್ಣಗೌಡ ಸರ್ಕಾರಿ ಪ್ರೌಢಶಾಲಾವರಣದಲ್ಲಿ ಆಯೋಜಿಸಲಾಗಿದ್ದ ಉಚಿತ ಬೈಸಿಕಲ್ ವಿತರಣಾ ಸಮಾರಂಭದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನ ಮಹತ್ತರ ಘಟ್ಟವಾಗಿದ್ದು, ಕಲಿಕೆಯ ದಿನಗಳಲ್ಲಿ ಸಮಯವನ್ನು ವ್ಯರ್ಥಗೊಳಿಸದೇ ಸತತ ಅಧ್ಯಯನದತ್ತ ಗಮನ ಹರಿಸಿ ಉತ್ತಮ ಅಂಕಗಳಿಸಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು. ಉತ್ತಮ ಅಂಕಗಳಿಸಿ ಶಾಲೆಗೆ, ಶಿಕ್ಷಕರಿಗೆ, ಪೋಷಕರಿಗೆ ಒಳ್ಳೆ ಹೆಸರು ತರಬೇಕು ಎಂದು ಸಲಹೆ ನೀಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್.ಎಸ್. ನಟೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುಪಯೋಗಪಡಿಸಿಕೊಳ್ಳಬೇಕು ಎಂದರು. ಮುಖ್ಯ ಅತಿಥಿಗಳಾಗಿ ತಾಪಂ ಸದಸ್ಯೆ ಗೀತಾ ಶ್ರೀನಿವಾಸ್ ನಾಯಕ್,ಬಿ.ವಿ. ಗೋಪಾಲ್‌ರಾವ್ ಉಪಸ್ಥಿತರಿದ್ದರು. ಪಿ. ಸುರೇಶ್ ಸ್ವಾಗತಿಸಿದರು. ಲಕ್ಷ್ಮಣ್ ನಾಯಕ್ ನಿರೂಪಿಸಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.