ಕೊಹಿಂದ ಸಮುದಾಯಕ್ಕೆ ಕಾಂಗ್ರೆಸ್ ಅನ್ಯಾಯ: ಗಂಗರಾಜು
ಚಿಕ್ಕಮಗಳೂರು: ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕೊಹಿಂದ ವರ್ಗಕ್ಕೆ ಸೇರಿದ ಸಮಾಜಗಳಿಗೆ ನೀಡಿದ ಯೋಜನೆಗಳನ್ನು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕೆಲವೇ ತಿಂಗಳುಗಳಲ್ಲಿ ಸ್ಥಗಿತಗೊಳಿಸುವ ಮೂಲಕ ಬಡವರ ಬಗ್ಗೆ ಇರುವ ಕಾಳಜಿಯನ್ನು ಪ್ರದರ್ಶಿಸಿದೆ ಎಂದು ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಉಪಾಧ್ಯಕ್ಷ ಗಂಗರಾಜು ಟೀಕಿಸಿದ್ದಾರೆ.
ತುಮಕೂರಿನಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಕೊಹಿಂದ ಸಮಾವೇಶದ ಅಂಗವಾಗಿ ನಗರದ ಪಾಂಚಜನ್ಯ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಎಸ್ಸಿ ಮೋರ್ಚಾ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಎಲ್ಲ ವರ್ಗದವರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಕೆಲವೆ ತಿಂಗಳಲ್ಲಿ ಕೊಳಚಗೇರಿ, ಹಿಂದುಳಿದ ಮತ್ತು ದಲಿತ ಸಮುದಾಯಗಳಿಗೆ ಕೊಟ್ಟಿರುವ ಯೋಜನೆಗಳನ್ನು ಸ್ಥಗಿತಗೊಳಿಸುವ ಮೂಲಕ ಅನ್ಯಾಯವೆಸಗಿದೆ. ಯುಪಿಎ ಸರ್ಕಾರದ ವೈಫಲ್ಯ ಮತ್ತಿತರೆ ಧೋರಣೆಗಳ ಬಗ್ಗೆ ಜನಸಾಮಾನ್ಯರಿಗೆ ತಿಳಿಸುವ ಸಲುವಾಗಿ ಫೆ. 23 ರಂದು ತುಮಕೂರಿನ ಸರ್ಕಾರಿ ಕಾಲೇಜು ಮೈದಾನದಲ್ಲಿ ಕೊಹಿಂದ ಸ್ವಾಭಿಮಾನಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಪರಿಶಿಷ್ಟರಿಗೆ ಮನ್ನಣೆ: ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ. ವೆಂಕಟೇಶ್ ಮಾತನಾಡಿ, ಪರಿಶಿಷ್ಟರನ್ನು ವೋಟ್ ಬ್ಯಾಂಕ್ನ್ನಾಗಿ ಉಪಯೋಗಿಸಿಕೊಂಡು ಆಶ್ವಾಸನೆಗಳ ಮೂಲಕ ಮೂಗಿಗೆ ತುಪ್ಪ ಸವರಿದ್ದೆ ಕಾಂಗ್ರೆಸ್ ಸರ್ಕಾರಗಳ ಕಳೆದ 50 ವರ್ಷದ ಸಾಧನೆ. ಸ್ವಾತಂತ್ರ್ಯ ಬಂದು 65 ವರ್ಷ ಕಳೆದರೂ ಕಾಲೋನಿಗಳ ಅಭಿವೃದ್ಧಿ ಮಾತ್ರ ಕನಸಾಗಿತ್ತು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪರಿಶಿಷ್ಟರಿಗೆ ಮನ್ನಣೆ ನೀಡಿದೆ ಎಂದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಸುಜಾತ, ಸದಸ್ಯರಾದ ನಾಗರಾಜ್, ಜೆ.ಡಿ. ಲೋಕೇಶ್, ಮಾಲಿನಿಬಾಯಿ ರಾಜಾನಾಯ್ಕ, ಅನ್ನಪೂರ್ಣ, ಕಡೂರು ತಾಪಂ ಸದಸ್ಯ ಆರ್. ಶಿವಕುಮಾರ್, ನಗರಸಭೆ ಸದಸ್ಯ ಜಗದೀಶ್, ದೀಪಕ್ ದೊಡ್ಡಯ್ಯ ಹಾಗೂ ಕ್ಷೇತ್ರ ಸಮಿತಿ ಅಧ್ಯಕ್ಷರು ಸಭೆಯಲ್ಲಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

