ಚಿಕ್ಕಮಗಳೂರು

'100 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ'

Published On :

ಚಿಕ್ಕಮಗಳೂರು: ತಾವು ಶಾಸಕರಾದ ನಂತರ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 100 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಬಿ.ಬಿ. ನಿಂಗಯ್ಯ ಹೇಳಿದ್ದಾರೆ.
ತಾಲೂಕಿನ ಬನ್ನೂರಿನಲ್ಲಿ ಶನಿವಾರ 40 ಲಕ್ಷ ವೆಚ್ಚದ ಬನ್ನೂರು- ಹಾರ್ಜಿಹಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಈಗಾಗಲೇ ಮೂಡಿಗೆರೆ- ಬೇಲೂರು ರಸ್ತೆ, ಬಂಟ್ವಾಳ ರಸ್ತೆ, ಕಳಸ-ಹಿರೇಬೈಲು ಮತ್ತು ಕಳಸ- ಹೊರನಾಡು ಸೇರಿದಂತೆ ಬಹುತೇಕ ರಸ್ತೆ ಕಾಮಗಾರಿ ಪ್ರಗತಿಯಲ್ಲಿವೆ ಎಂದು ತಿಳಿಸಿದರು.
ತಮ್ಮ ಅವಧಿಯಲ್ಲಿ ಮಲೆನಾಡಿಗೆ ಮೂಲ ಸೌಕರ್ಯ ಒದಗಿಸಲು ಒತ್ತು ನೀಡಲಾಗುವುದು. ಈಗಾಗಲೇ ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷರನ್ನು ಭೇಟಿ ಮಾಡಿ ಚರ್ಚಿಸಲಾಗಿದೆ ಎಂದು ಹೇಳಿದರು.
ರಕ್ಷಣೆ ಮಾಡಿ: ಗುಣಮಟ್ಟದ ಕಾಮಗಾರಿ ಮಾಡುವಂತೆ ಗುತ್ತಿಗೆದಾರರಿಗೆ ಸೂಚಿಸಿದ ಅವರು, ಮಲೆನಾಡು ಭಾಗದಲ್ಲಿ ಅಭಿವೃದ್ಧಿಯಾದ ರಸ್ತೆ ಉಳಿಸಿಕೊಳ್ಳುವ ಕೆಲಸವನ್ನು ಕಾಫಿ ಬೆಳೆಗಾರರು ಮಾಡಬೇಕು. ರಸ್ತೆ ಮೇಲೆ ಚಾಚಿರುವ ಮರದ ಕೊಂಬೆಗಳನ್ನು ಕಡಿತಲೆ ಮಾಡುವ ಮೂಲಕ ರಸ್ತೆ ಹಾಳಾಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಜೆಡಿಎಸ್ ಹೋಬಳಿ ಅಧ್ಯಕ್ಷ ಡಿ.ಎಂ. ಪ್ರವೀಣ್, ಸಂಘಟನಾ ಕಾರ್ಯದರ್ಶಿ ತಿಪ್ಪೇಗೌಡ, ಕಾಫಿ ಬೆಳೆಗಾರ ಬಿಳಿಯಪ್ಪಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್, ಮರಗುಂದ ಪ್ರಸನ್ನ, ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ನಾಗರಾಜ್ ನಾಯ್ಕ, ಲೋಕೇಶ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.