ದಿನಗೂಲಿ ನೌಕರರನ್ನಾಗಿಸಲು ಆಗ್ರಹ
ಚಿಕ್ಕಮಗಳೂರು: ರಾಜ್ಯದ ಅರಣ್ಯ ಪ್ರೇರಕರ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆದು ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅರಣ್ಯ ಸಚಿವ ರಮಾನಾಥ ರೈ ಹೇಳಿದ್ದಾರೆ.
ರಾಜ್ಯ ಕಿಸಾನ್ ಕಾಂಗ್ರೆಸ್ ಉಪಾಧ್ಯಕ್ಷ ಸಚಿನ್ ಮೀಗಾರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಅರಣ್ಯ ಪ್ರೇರಕರು ಅರಣ್ಯ ಸಚಿವ ರಮಾನಾಥ ರೈ ಅವರನ್ನು ಗೃಹ ಕಚೇರಿಯಲ್ಲಿ ಶನಿವಾರ ಭೇಟಿಯಾಗಿ ಅರಣ್ಯ ಪ್ರೇರಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.
ಆರ್ಥಿಕ ಸಂಕಷ್ಟ: ತಮ್ಮ ಅಳಲನ್ನು ತೋಡಿಕೊಂಡ ಅರಣ್ಯ ಪ್ರೇರಕರು, ಕಳೆದ 25- 30 ವರ್ಷದಿಂದ ಅರಣ್ಯ ಪ್ರೇರಕರಾಗಿ ಕೆಲಸ ನಿರ್ವಹಿಸುತ್ತಿರುವ ತಮಗೆ ಆಗಿನ ದಿನಗಳಲ್ಲಿ ನಿಗದಿಪಡಿಸಿದ ವೇತನವು ಪ್ರಸ್ತುತ ಇಂದಿನ ದಿನದವರೆಗೂ ಅದೇ ಸಂಬಳವು ಪಾವತಿಯಾಗುತ್ತಿರುವುದಾಗಿರುವುದರಿಂದ ಕುಟುಂಬ ನಿರ್ವಹಣೆಯು ಇಂದಿನ ಆರ್ಥಿಕ ಸಂಕಷ್ಟಗಳ ದಿನಗಳಲ್ಲಿ ಕಷ್ಟ ಸಾಧ್ಯವಾಗುತ್ತಿದೆ.
ಈಗಾಗಲೇ ಹಲವಾರು ಅರಣ್ಯ ಪ್ರೇರಕರು ವಯೋನಿವೃತ್ತಿ ಹೊಂದಿದವರಾಗಿದ್ದು, ಸದರಿಯವರಿಗೆ ಸರ್ಕಾರದಿಂದ ಯಾವುದೇ ನಿವೃತ್ತಿ ಸೌಲಭ್ಯಗಳು ದೊರಕುತ್ತಿಲ್ಲ.
ಅಲ್ಲದೆ, ಬಹುತೇಕ ಅರಣ್ಯ ಪ್ರೇರಕರು ನಿವೃತ್ತಿಯ ಅಂಚಿನಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅರಣ್ಯ ಪ್ರೇರಕರನ್ನು ರಾಜ್ಯ ದಿನಗೂಲಿ ನೌಕರರನ್ನಾಗಿ ಪರಿಗಣಿಸಬೇಕೆಂದು ಒತ್ತಾಯಿಸಿದರು.
ನಿಯೋಗದಲ್ಲಿ ರಾಜ್ಯ ಅರಣ್ಯ ಪ್ರೇರಕರ ಸಂಘದ ಪ್ರಧಾನ ಕಾರ್ಯದರ್ಶಿ ಶಿವಣ್ಣ ಮಳವಳ್ಳಿ, ಜಿಲ್ಲಾ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

