ಚಿಕ್ಕಮಗಳೂರು

ಟನ್ ಕಬ್ಬಿಗೆ 150 ಪ್ರೋತ್ಸಾಹಧನ

Published On :

ಚಿಕ್ಕಮಗಳೂರು: 2013- 14ನೇ ಸಾಲಿನಲ್ಲಿ ಎಂಪಿಎಂ ಸಕ್ಕರೆ ಕಾರ್ಖಾನೆಗೆ ಕಬ್ಬು ವಿತರಣೆ ಮಾಡಿದ ರೈತರಿಗೆ ಸರ್ಕಾರದಿಂದ ಪ್ರತಿ ಟನ್ ಕಬ್ಬಿಗೆ 150 ಪ್ರೋತ್ಸಾಹಧನ ಮಂಜೂರಾಗಿದೆ. ಪ್ರೋತ್ಸಾಹ ಧನವನ್ನು ಜಿಲ್ಲೆಯ ಜಿಲ್ಲಾಧಿಕಾರಿ ಮುಖಾಂತರ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡುವ ಹಿನ್ನೆಲೆಯಲ್ಲಿ ರೈತರು ಹೊಂದಿರುವ ಬ್ಯಾಂಕ್ ಖಾತೆ ಸಂಖ್ಯೆ, ಬ್ಯಾಂಕ್‌ನ ಹೆಸರು, ಐಎಫ್‌ಎಸ್‌ಸಿ ಕೋಡ್, ಬ್ಯಾಂಕ್‌ನ ಸ್ಥಳ ಸೇರಿದಂತೆ ಇತರೆ ವಿವರಗಳನ್ನು ಎಂಪಿಎಂ ಸಕ್ಕರೆ ಕಾರ್ಖಾನೆ, ಭದ್ರಾವತಿ, ಇವರ ಮುಖಾಂತರ ಜಿಲ್ಲಾಧಿಕಾರಿ ಕಚೇರಿಗೆ 3 ದಿನದೊಳಗಾಗಿ ಸಲ್ಲಿಸುವಂತೆ ಡಿಸಿ ಕಚೇರಿ ಪ್ರಕಟಣೆ ತಿಳಿಸಿದೆ.
ಯುವ ಪ್ರಶಸ್ತಿಗೆ ಅರ್ಜಿ ಆಹ್ವಾನ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕ್ರೀಡೆ, ಸಂಸ್ಕೃತಿ ಹಾಗೂ ಸಮುದಾಯ ಅಭಿವೃದ್ಧಿ ಕ್ಷೇತ್ರಗಳಲ್ಲಿ ಉತ್ತಮ ಕಾರ್ಯ ಚಟುವಟಿಕೆಯನ್ನು ನಿರ್ವಹಿಸಿರುವ ನೋಂದಾಯಿತ ಯುವತಿ, ಯುವಕ ಸಂಘಗಳಿಗೆ ಹಾಗೂ ಯುವಕ, ಯುವತಿಯರಿಗೆ ವೈಯಕ್ತಿಕವಾಗಿ 2013- 14ನೇ ಸಾಲಿನ ಯುವ ಪ್ರಶಸ್ತಿ ನೀಡಲು ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ, ಜ್ಯೋತಿ ನಗರ, ಚಿಕ್ಕಮಗಳೂರು, ದೂ.ಸಂ: 08262- 220324 ಇವರನ್ನು ಸಂಪರ್ಕಿಸಿ.
ಆರ್‌ಟಿಇ: ಅವಧಿ ವಿಸ್ತರಣೆ
ಚಿಕ್ಕಮಗಳೂರು: ಶೈಕ್ಷಣಿಕ ಸಾಲಿನ ಮಕ್ಕಳ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನವನ್ನು ವಿಸ್ತರಿಸಲಾಗಿದೆ. ಶಾಲಾ ದಾಖಲಾತಿ ಕೋರಿ ಪೋಷಕರು ಅರ್ಜಿ ಸಲ್ಲಿಸುವ ದಿನವನ್ನು ಫೆ. 19 ರವರೆಗೆ ವಿಸ್ತರಿಸಲಾಗಿದೆ. ಸ್ವೀಕರಿಸಿದ ಅರ್ಜಿಗಳನ್ನು ನಿಯಾಮಾನುಸಾರ ಪರಿಶೀಲನೆ ನಡೆಸಿ ಆಯ್ಕೆ ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸುವ ದಿನವನ್ನು ಫೆ. 24 ರವರೆಗೆ, ದಾಖಲಾತಿಯನ್ನು ಅನುಮೋದಿಸಿ ಪಟ್ಟಿಯನ್ನು ಸಂಬಂಧಪಟ್ಟ ಶಾಲೆಗಳಿಗೆ ಕಳುಹಿಸುವ ದಿನವನ್ನು ಮಾ. 3 ರವರೆಗೆ ವಿಸ್ತರಿಸಲಾಗಿದೆ ಹಾಗೂ ಮಾ. 15ರಿಂದ ಶಾಲೆಗಳಲ್ಲಿ ದಾಖಲಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಶಿಕ್ಷಣ ಹಕ್ಕು ಕಾಯಿದೆಯಡಿ ಅರ್ಜಿ ಸಲ್ಲಿಸಲು ಪೋಷಕರ ವಾರ್ಷಿಕ ಆದಾಯ ಪ್ರಮಾಣ ಪತ್ರ. ಅರ್ಜಿಯೊಂದಿಗೆ ವಿಳಾಸ ದೃಢೀಕರಣ, ಜನನ ಪ್ರಮಾಣ ಪತ್ರ, ಆದಾಯ ಮತ್ತು ಜಾತಿ ಪ್ರಮಾಣ ಸಲ್ಲಿಸಬೇಕು. ಅರ್ಜಿಗಳು ಆಯಾ ತಾಲ್ಲೂಕು ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸಂಬಂಧಿಸಿದ ಶಾಲೆಗಳಲ್ಲಿ ದೊರೆಯುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.